ರಬ್ಬರ್ ಬೆಲೆ ಕುಸಿತ ಹಾಗೂ ಇತರ ಸಮಸ್ಯೆಗಳ ಬಗ್ಗೆ ನಿಯೋಗವು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಉಜಿರೆ ರಬ್ಬರ್ ಸೊಸೈಟಿ ಹಾಗೂ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಹಾಗೂ ಶಾಸಕ ಹರೀಶ್ ಪೂಂಜಾ ನೇತೃತ್ವದ ನಿಯೋಗವು ಸಚಿವರನ್ನು ಭೇಟಿಯಾಯಿತು. ಈ ಸಂದರ್ಭ ರಬ್ಬರ್ ಕೃಷಿಕರ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಲಾಯಿತು. ಅಲ್ಲದೆ ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಬೆಂಬಲ ಬೆಲೆ ಘೋಷಿಸುವಂತೆ ಮನವಿಸಲಾಯಿತು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವರು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ನಿರ್ದೇಶಕ ಫಾ. ಶಾಜಿ ಮ್ಯಾಥ್ಯು , ಅಧ್ಯಕ್ಷ ಬಿಟ್ಟಿ ಬಿ ನೆಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ಎಂ.ಜೆ, ಪಿಆರ್‌ಒ ಸೆಬಾಸ್ಟಿಯನ್ ಪಿ ಸಿ, , ಸಿಇಒ ರಾಜು ಶೆಟ್ಟಿ, ನಿರ್ದೇಶಕ ಎಚ್ ಪದ್ಮ ಗೌಡ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…