ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

August 4, 2026
9:14 PM
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಯಲ್ಲಿ ನಿಯಮ 377ರಡಿ ಒತ್ತಾಯಿಸಿದರು. CBIC ಮೂಲಕ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರು ವಿದೇಶಗಳಿಂದ ಆಮದಾಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ದೇಶೀಯ ಅಡಿಕೆ ಬೆಳೆಗಾರರ ಹಿತ ಕಾಪಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಯಲ್ಲಿ ನಿಯಮ 377ರಡಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಪ್ರಸ್ತಾಪನೆಯಲ್ಲಿ ಇಂಡೋನೇಷಿಯಾ, ಮ್ಯಾನ್ಮಾರ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಕಳಪೆ ಗುಣಮಟ್ಟದ ಅಡಿಕೆ ಭಾರತಕ್ಕೆ ಆಮದಾಗುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಈ ಅಡಿಕೆಗಳನ್ನು ಕಸ್ಟಮ್ಸ್ ಸುಂಕ ತಪ್ಪಿಸಲು “ಹುರಿದ ಅಡಿಕೆ” ಎಂದು ನಮೂದಿಸಿ ದೇಶಕ್ಕೆ ತರಲಾಗುತ್ತಿದೆ ಎಂಬ ಆರೋಪವನ್ನು ದೇಶೀಯ ಅಡಿಕೆ ಬೆಳೆಗಾರರು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂತಹ ಅಕ್ರಮ ಆಮದನ್ನು ತಕ್ಷಣ ನಿಯಂತ್ರಿಸದಿದ್ದರೆ ಕರ್ನಾಟಕ ಸೇರಿದಂತೆ ದೇಶದ ಅಡಿಕೆ ಬೆಳೆಗಾರರಿಗೆ ಬೆಲೆ ಕುಸಿತದ ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ದೇಶೀಯ ಚಾಲಿ ಹಾಗೂ ರಾಶಿ ಸೇರಿದಂತೆ ಉತ್ತಮ ಗುಣಮಟ್ಟದ ಅಡಿಕೆಯೊಂದಿಗೆ ಕಳಪೆ ಅಡಿಕೆಯನ್ನು ಬೆರೆಸಿ ಮಾರಾಟ ಮಾಡುವುದರಿಂದ ಭಾರತೀಯ ಅಡಿಕೆಯ ಗುಣಮಟ್ಟದ ಖ್ಯಾತಿಗೂ ಧಕ್ಕೆ ಉಂಟಾಗಲಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ (CBIC) ಮೂಲಕ ಸಮಗ್ರ ಲೆಕ್ಕಪರಿಶೋಧನೆ ನಡೆಸಿ ಅಡಿಕೆ ಆಮದಿನ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ದೇಶದ ವಿವಿಧ ಬಂದರುಗಳಿಗೆ ಆಮದಾಗುವ ಅಡಿಕೆಯನ್ನು ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿ, ಅಕ್ರಮ ಹಾಗೂ ಕಳಪೆ ಅಡಿಕೆ ಆಮದನ್ನು ನಿಯಂತ್ರಿಸುವ ಮೂಲಕ ದೇಶೀಯ ಅಡಿಕೆ ಬೆಳೆಗಾರರ ಹಿತವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಪ್ರಸ್ತಾಪನೆಯಲ್ಲಿ ಮನವಿ ಮಾಡಿದ್ದಾರೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

BJP MP Kota Srinivas Poojary has raised the issue of low-quality areca nut imports under Rule 377 in the Lok Sabha, urging the Central Government to protect Karnataka’s areca nut growers. He sought stricter CBIC monitoring, quality inspections at ports, and action against alleged duty evasion in areca nut imports.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror