ಗ್ರಾಮ ಸ್ವರಾಜ್ಯ ಅಭಿಯಾನದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

April 14, 2022
10:28 PM

ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್‌ಜಿಎಸ್‌ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ 5,911 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. ಈ ಪೈಕಿ 3,700 ಕೋಟಿ ರೂ. ಕೇಂದ್ರ ಸರ್ಕಾರ, 2,211 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಲಿವೆ.

ಪರಿಷ್ಕೃತ ಯೋಜನೆಯ ಅನ್ವಯ ಏ.1 ರಿಂದ 2026 ರ ಮಾ.31 ರ ವರೆಗೆ ದೇಶದ 2.78 ಲಕ್ಷ ಗ್ರಾಮ ಪಂಚಾಯತ್‌ ವ್ಯಾಪ್ತಿಗಳಲ್ಲಿರುವ 60 ಲಕ್ಷ ಚುನಾಯಿತ ಪ್ರತಿನಿಧಿಗಳು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದರಿಂದ ನೆರವಾಗಲಿದೆ.

ಅಭಿವೃದ್ಧಿ ಗುರಿಯನ್ನೇ ಪ್ರಮುಖವಾಗಿ ಇರಿಸಿಕೊಳ್ಳಲಾಗಿರುವ ಬಡತನ ಮುಕ್ತ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಜೀವನ ಕ್ರಮ, ಆರೋಗ್ಯಯುಕ್ತ ಗ್ರಾಮ, ಮಕ್ಕಳ ಸ್ನೇಹಿ ವಾತಾವರಣ ಇರುವ, ಉತ್ತಮ ರೀತಿಯಲ್ಲಿ ನೀರು ಪೂರೈಕೆ, ನೈರ್ಮಲೀಕರಣ ಮತ್ತು ಹಸಿರುಯುಕ್ತ, ಮೂಲಸೌಕರ್ಯಗಳಲ್ಲಿ ಸ್ವಾವಲಂಬನೆ, ಸಾಮಾಜಿಕವಾಗಿ ಕೂಡ ಭದ್ರತೆ ಹೊಂದಿರುವ, ಉತ್ತಮ ಆಡಳಿತ ವ್ಯವಸ್ಥೆ ಹೊಂದಿರುವ ಮತ್ತು ಅಳಿವಿನ ಅಂಚಿನಲ್ಲಿರುವ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಾಪಾಡಿಕೊಳ್ಳುವ ಅಂಶಗಳನ್ನು ಆರ್‌ಜಿಎಸ್‌ಎ ಒಳಗೊಂಡಿದೆ.

ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಇರುವ ಹಲವು ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror