ಕೇಂದ್ರ ಸರ್ಕಾರ 2018ರಲ್ಲಿ ಜಾರಿಗೊಳಿಸಿದ ರಾಷ್ಟ್ರೀಯ ಗ್ರಾಮ ಸ್ವರಾಜ್ಯ ಅಭಿಯಾನ (ಆರ್‌ಜಿಎಸ್‌ಎ)ದ ಪರಿಷ್ಕೃತ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ 5,911 ಕೋಟಿ ರೂ. ವೆಚ್ಚದ ಪರಿಷ್ಕೃತ ಯೋಜನೆಗೆ ಸಮ್ಮತಿ ಸೂಚಿಸಲಾಗಿದೆ. ಈ ಪೈಕಿ 3,700 ಕೋಟಿ ರೂ. ಕೇಂದ್ರ ಸರ್ಕಾರ, 2,211 ಕೋಟಿ ರೂ. ಮೊತ್ತವನ್ನು ರಾಜ್ಯ ಸರ್ಕಾರಗಳು ನೀಡಲಿವೆ.
ಪರಿಷ್ಕೃತ ಯೋಜನೆಯ ಅನ್ವಯ ಏ.1 ರಿಂದ 2026 ರ ಮಾ.31 ರ ವರೆಗೆ ದೇಶದ 2.78 ಲಕ್ಷ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿರುವ 60 ಲಕ್ಷ ಚುನಾಯಿತ ಪ್ರತಿನಿಧಿಗಳು, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದರಿಂದ ನೆರವಾಗಲಿದೆ.
ಅಭಿವೃದ್ಧಿ ಗುರಿಯನ್ನೇ ಪ್ರಮುಖವಾಗಿ ಇರಿಸಿಕೊಳ್ಳಲಾಗಿರುವ ಬಡತನ ಮುಕ್ತ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುಧಾರಿತ ಜೀವನ ಕ್ರಮ, ಆರೋಗ್ಯಯುಕ್ತ ಗ್ರಾಮ, ಮಕ್ಕಳ ಸ್ನೇಹಿ ವಾತಾವರಣ ಇರುವ, ಉತ್ತಮ ರೀತಿಯಲ್ಲಿ ನೀರು ಪೂರೈಕೆ, ನೈರ್ಮಲೀಕರಣ ಮತ್ತು ಹಸಿರುಯುಕ್ತ, ಮೂಲಸೌಕರ್ಯಗಳಲ್ಲಿ ಸ್ವಾವಲಂಬನೆ, ಸಾಮಾಜಿಕವಾಗಿ ಕೂಡ ಭದ್ರತೆ ಹೊಂದಿರುವ, ಉತ್ತಮ ಆಡಳಿತ ವ್ಯವಸ್ಥೆ ಹೊಂದಿರುವ ಮತ್ತು ಅಳಿವಿನ ಅಂಚಿನಲ್ಲಿರುವ ವ್ಯವಸ್ಥೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಾಪಾಡಿಕೊಳ್ಳುವ ಅಂಶಗಳನ್ನು ಆರ್‌ಜಿಎಸ್‌ಎ ಒಳಗೊಂಡಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವೆ ಇರುವ ಹಲವು ಅಂತರವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ನೆರವಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…