ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದಾಪುರ .ಕೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಗ್ರಾಮಪಂಚಾಯಿತಿ ಕಾರ್ಯಾಲಯದ ಕಟ್ಟಡ ಮತ್ತು ರಾಷ್ಟ್ರೀಯ ಗ್ರಾಮೀಣ ಜನವಸತಿ ಮಿಷನ್ ಗೋದಾಮು ಕಟ್ಟಡವನ್ನು ಭಾರಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಜನರು ಯಾವುದೇ ಕಾರಣಕ್ಕೂ ಭೂಮಿಯನ್ನು ಮಾರಾಟ ಮಾಡಿಕೊಳ್ಳಲು ಮುಂದಾಗಬಾರದು. ಇರುವ ಜಮೀನನ್ನು ಉಳಿಸಿಕೊಳ್ಳುವ ಕಡೆಗೆ ಒತ್ತು ನೀಡಬೇಕು. ಮಹಾತ್ಮಾ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮಪಂಚಾಯಿತಿಯನ್ನು ಅತ್ಯುತ್ತಮವಾಗಿ ನಿರ್ಮಿಸಿದ್ದು, ಈ ಮೂಲಕ ಜನರಿಗೆ ಉತ್ತಮ ಸೇವೆಯನ್ನು ಕಲ್ಪಿಸಬೇಕಾಗಿದೆ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ ಪದ್ಮಿನಿ ಬಿರಾದಾರ ಮಾತನಾಡಿ, ಗ್ರಾಮ ಪಂಚಾಯಿತಿ ಮೂಲಕ ಜನರಿಗೆ ಅಗತ್ಯವಾಗಿರುವ ರಸ್ತೆ, ವಿದ್ಯುತ್, ನೀರು ಸೇರಿದಂತೆ ಇನ್ನಿತರೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಮಾತನಾಡಿ, ದೇಶದಲ್ಲಿ ಶೇಕಡ 70ರಷ್ಟು ಜನರು ಹಳ್ಳಿಗಳಲ್ಲೇ ಬದುಕು ಕಟ್ಟಿಕೊಂಡಿದ್ದಾರೆ. ಹಳ್ಳಿಗಳು ಅಭಿವೃದ್ಧಿಯಾದಾಗ ದೇಶ ಅಭಿವೃದ್ಧಿ ಸಾಧ್ಯ. ಹಳ್ಳಿಗಳ ಅಭಿವೃದ್ಧಿ ವಿಷಯದಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಹಿರಿದು ಎಂದು ತಿಳಿಸಿದರು.
ಈ ವೇಳೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಹೊಸಮನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪದ್ಮಿನಿ ಬಿರಾದಾರ, ಬಸವಂತರಾಯ ಬಿರಾದಾರ ಹಾಗೂ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…