Advertisement
MIRROR FOCUS

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

Share

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಶಾಲಿನಿ ರಜನೀಶ್,  ನಬಾರ್ಡ್ ವಿಶೇಷ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಿದೆ. ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಹಾಗೂ ಯುವ ಜನತೆ ನಬಾರ್ಡ್ ನ ವಿವಿಧ ಯೋಜನೆಗಳನನ್ನು ಸದುಪಯೋಗಪಡಿಸಿಕೊಂಡು, ಉದ್ಯಮಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

RBIನ ಪ್ರಾದೇಶಿಕ ನಿರ್ದೇಶಕರಾದ ಸೋನಾಲಿ ಸೇನ್ ಗುಪ್ತಾ, ಇಂದಿನ ಸಮಗ್ರ ಹಣಕಾಸು ಸಹಕಾರಿ ಬ್ಯಾಂಕಿಂಗ್ ಸುಧಾರಣೆಗಾಗಿ ನಬಾರ್ಡ್ ಶ್ರಮಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ ನಬಾರ್ಡ್ ಮಾಡುತ್ತಿರುವ ಕಾರ್ಯ ಪ್ರಶಂಸನೀಯ ಎಂದರು.

ನಬಾರ್ಡ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಡಾ.ಸುರೇಂದ್ರ ಬಾಬು, ಗ್ರಾಮೀಣ ಪ್ರದೇಶಗಳ ಆರ್ಥಿಕ ಮಟ್ಟ ಸುಧಾರಣೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳ ಪ್ರಗತಿಗೆ ನಬಾರ್ಡ್ ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಕೆನರಾ ಬ್ಯಾಂಕ್ ನ   ಕಾರ್ಯನಿರ್ವಾಹಕ ನಿರ್ದೇಶಕ  ಭವೇಂದ್ರ ಕುಮಾರ್, ನಬಾರ್ಡ್ 44 ವರ್ಷದ ಯುವ ಸಂಸ್ಥೆಯಾಗಿದೆ, ಬ್ಯಾಂಕಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಕಾಲದಿಂದ ನಾನು ನಬಾರ್ಡ್ ಪ್ರಗತಿ ಕಂಡಿದ್ದೇನೆ, ನಬಾರ್ಡ್ ಎಲ್ಲಾ ಬ್ಯಾಂಕರ್ ಗಳ ಜೊತೆ ಸದಾ ಇರಲಿದೆ. ಗ್ರಾಮೀಣ ಕೃಷಿ ಕ್ಷೇತ್ರದ ಸಂಶೋಧನ ತಂಡ ಅನೇಕ ಯೋಜನೆಗಳನ್ನು ಆವಿಷ್ಕರಿಸುವ ಮೂಲಕ ದೇಶದ ಪ್ರಗತಿಗೆ ಕಾರಣವಾಗಿದೆ. 2047ರ ವಿಕಸಿತ ಭಾರತದ ಪ್ರಗತಿಗೆ ನಬಾರ್ಡ್ ಕೊಡುಗೆ ಬಹಳ ಮುಖ್ಯವಾಗಿದೆ ಎಂದು ಹೇಳಿದರು.

ಈ ವೇಳೆ  ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಭಂಡಿವಾಡ್, ಉಪ ಪ್ರಧಾನ ವ್ಯವಸ್ಥಾಪಕ  ಶ್ರೀಜಾ ನಾಯರ್  ಸೇರಿದಂತೆ ಬ್ಯಾಂಕಿಂಗ್ ವಲಯದ ಹಿರಿಯ ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಸಹಕಾರಿ ಮತ್ತು ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

8 minutes ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

4 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

22 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago