ಗ್ರಾಮೀಣ ಜನರೇ ಎಚ್ಚರ.. | ಕಂಬಳಿ ಮಾರಾಟದ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ | ಒಂಟಿ ಮನೆ, ಒಂಟಿ ಮಹಿಳೆಯರೇ ಹುಷಾರು.. | |

October 21, 2022
12:07 PM

ಕಂಬಳಿ ಮಾರುವ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಕಡಬದ ಕಾಣಿಯೂರು ಸಮೀಪದ ದೋಳ್ಪಾಡಿ ಎಂಬಲ್ಲಿ ನಡೆದಿದೆ. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಮಾರಾಟ ಜಾಲಗಳು ವಿಸ್ತಾರವಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ಕಡೆಗೆ ಗಮನಹರಿಸಲಾಗುತ್ತಿದೆ.

ದೋಳ್ಪಾಡಿಯಲ್ಲಿ ಈ ಘಟನೆ ನಡೆದ ತಕ್ಷಣವೇ  ಮಹಿಳೆ ಕಿರುಚಾಡಿಕೊಂಡಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಳಲಿಯ ಅಡ್ಡೂರು ನಿವಾಸಿಗಳಾದ ರಫೀಕ್ ಹಾಗೂ ರಮಿಯಾಸುದ್ದಿನ್ ಅಪಘಾತದಲ್ಲಿ ಗಾಯಗೊಂಡವರು. ಇವರ ವಿರುದ್ಧ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ಮಹಿಳೆ ದೂರು ನೀಡಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಆರೋಪಿಗಳನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆ ಮನೆಗೆ ಬಟ್ಟೆ, ಕಂಬಳಿ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟ ಮಾಡುವ ತಂಡಗಳು ಒಂಟಿ ಮನೆ ಹಾಗೂ ಒಬ್ಬಂಟಿ ಮಹಿಳೆಯರು ಇರುವ ಮನೆಯನ್ನು  ಗುರುತಿಸಿಕೊಂಡು ಆಗಾಗ ಭೇಟಿ ನೀಡುತ್ತಾರೆ. ಸ್ವಲ್ಪ ಪರಿಚಯವಾದ ಬಳಿಕ ಮನೆ ದರೋಡೆ, ಅತ್ಯಾಚಾರ ಸೇರಿದಂತೆ ಕಳ್ಳತನವೂ ನಡೆಸುತ್ತಾರೆ , ಹೀಗಾಗಿ ಎಚ್ಚರಿಕೆ ಇರಬೇಕುನ ಎಂದು ಆಗಾಗ ಪೊಲೀಸ್‌ ಇಲಾಖೆ ಎಚ್ಚರಿಸುತ್ತದೆ. ಕೆಲವು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತಲೆಹೊರೆ ಮೂಲಕ ಮಾರಾಟ ಮಾಡುವ ವಸ್ತುಗಳಿದ್ದರೆ ಪಂಚಾಯತ್‌ ವ್ಯಾಪ್ತಿಯಲ್ಲಿ ಮೊದಲೇ ನೋಂದಣಿ ಮಾಡಿ ಅನುಮತಿ ಪಡೆದು ಮನೆ ಮನೆಗೆ ತೆರಳಬೇಕು ಎಂದು ಕಟ್ಟು ನಿಟ್ಟಾದ ನಿಯಮ ಜಾರಿ ಮಾಡಿದೆ.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?
December 16, 2025
1:47 PM
by: ಸಾಯಿಶೇಖರ್ ಕರಿಕಳ
ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ
December 16, 2025
7:22 AM
by: ರೂರಲ್‌ ಮಿರರ್ ಸುದ್ದಿಜಾಲ
ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ
December 16, 2025
7:20 AM
by: ರೂರಲ್‌ ಮಿರರ್ ಸುದ್ದಿಜಾಲ
ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ
December 16, 2025
7:17 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror