ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್ ವ್ಯಾಪ್ತಿಗೆ ಬಂದರೂ, ಪಂಚಾಯತ್ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.
Advertisement
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement