#RuralRoad | ಮಳೆ ಆರಂಭವಾಯ್ತು | ಗ್ರಾಮೀಣ ರಸ್ತೆಗಳ ಅವ್ಯವಸ್ಥೆಗಳೂ ಆರಂಭವಾಯ್ತು…! | ಬಾಳೆನೆಟ್ಟು ಜನರ ಆಕ್ರೋಶ |

July 3, 2023
7:06 PM
ಮಳೆ ಆರಂಭವಾದ ಕೆಲವೇ ದಿನಗಳಲ್ಲಿ ಗ್ರಾಮೀಣ ರಸ್ತೆಗಳ ಅವ್ಯವಸ್ಥೆ ಹೇಳತೀರದು. ಇದೀಗ ಸುಳ್ಯ ತಾಲೂಕಿನ ಕಲ್ಮಡ್ಕದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ.

ಮಳೆಗಾಲ ಆರಂಭವಾಗುವ ಹೊತ್ತಿಗೆ ಗ್ರಾಮೀಣ ರಸ್ತೆಗಳ ಸ್ಥಿತಿ ಸುಧಾರಣೆಯಾಗಬೇಕು. ಪ್ರತೀ ವರ್ಷ ಹದಗೆಡುವ ರಸ್ತೆ ಸುಧಾರಣೆಗೆ ಕ್ರಮಗಳ ಅಗತ್ಯ ಇದೆ. ಗ್ರಾಮೀಣ ರಸ್ತೆಗಳೆಲ್ಲವೂ ಪಂಚಾಯತ್‌ ವ್ಯಾಪ್ತಿಗೆ ಬಂದರೂ, ಪಂಚಾಯತ್‌ ಗಳಿಗೆ ಸಾಕಷ್ಟು ಅನುದಾನದ ಕೊರತೆ ಇರುತ್ತದೆ. ಹೀಗಾಗಿ ಆಡಳಿತವು ಗಮನಿಸಿ ಸ್ಪಂದಿಸಬೇಕಾಗುತ್ತದೆ. ಗ್ರಾಮೀಣ ಅಭಿವೃದ್ದಿಯ ಮೊದಲ ಹೆಜ್ಜೆಯೇ ಇಲ್ಲಿಂದ ಆರಂಭವಾಗುತ್ತದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ರಸ್ತೆ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ. ಸಾಕಷ್ಟು ಬಾರಿ ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಅದರ ಬಗ್ಗೆ ಗಮನವೇ ಹರಿಸಿಲ್ಲ ಎಂಬುದು ಸ್ಥಳೀಯರ ಆಕ್ರೋಶವಾಗಿದೆ.ಇದೀಗ ಈ ಮಳೆಗಾಲದ ಆರಂಭದಲ್ಲಿಯೇ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಳೆದ ವಾರವೇ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ. ಆದ್ದರಿಂದ ಆಕ್ರೋಶಿತ ಸ್ಥಳೀಯರು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror