ಐಐಟಿ ಖರಗಪುರ ನಡೆಸಿದ 2022ರ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ -ಗೇಟ್ ನಲ್ಲಿ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ದ್ವಿತೀಯ ವರ್ಷದ ಗ್ರಾಮೀಣ ಭಾಗದ ವಿದ್ಯಾರ್ಥಿನಿ ಸವಿತಾ ಎಂ. ಎಸ್. ರಾಷ್ಟ್ರಮಟ್ಟದಲ್ಲಿ ಉತ್ತಮ ರಾಂಕ್ ನೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳಲ್ಲಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಫೆಲೋಶಿಪ್‍ನೊಂದಿಗೆ ಸಂಶೋಧನಾರ್ಥಿಯಾಗಿ ಸೇರಲು ಅರ್ಹತೆ ಪಡೆದಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಇವರು ಈಗಾಗಲೇ ಇಸ್ರೋ (ಐ.ಎ..ಎಸ್ ಬೆಂಗಳೂರು ಪ್ರಾಯೋಜಿತ), ಐ.ಐ.ಎಸ್.ಎಸ್ ತಿರುವನಂತಪುರಂ, ಐ.ಐ.ಎ ಬೆಂಗಳೂರು ಮೊದಲಾದೆಡೆ ಸಮ್ಮರ್ ರಿಸರ್ಚ್ ಫೆಲೋಶಿಪ್‍ಗೆ ಆಯ್ಕೆಗೊಂಡು ಕಿರು ಸಂಶೋಧನೆಗಳನ್ನು ಯಶಸ್ವಿಯಾಗಿ ಪೂರೈಸಿರುತ್ತಾರೆ.
ಇವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲರಾದ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಹಾಗೂ ವಿಭಾಗದ ಸಂಯೋಜಕ ಡಾ.ಇ ದೀಪಕ್ ಡಿಸಿಲ್ವ ಅಭಿನಂದಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಶಿವಪ್ಪ ಗೌಡ ಮತ್ತುಯಮುನಾ ದಂಪತಿಗಳ ಪುತ್ರಿಯಾಗಿರುವ ಇವರು, ಹೈಸ್ಕೂಲ್ ವಿದ್ಯಾಭ್ಯಾಸವನ್ನು ಸರಕಾರಿ ಪ್ರೌಢಶಾಲೆ ದೇಲಂಪಾಡಿ, ಪಿಯುಸಿಯನ್ನು ಸರಕಾರಿ ಪದವಿಪೂರ್ವ ಕಾಲೇಜು ಪುತ್ತೂರು ಹಾಗೂ ಬಿ.ಎಸ್ಸಿ. ಪದವಿಯನ್ನು ಸಂತ ಫಿಲೋಮಿನಾ ಕಾಲೇಜಿನಲ್ಲಿಉತ್ತಮ ಶ್ರೇಣಿಯಲ್ಲಿಪಡೆದಿರುತ್ತಾರೆ.
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…