ಮನೆ ಬಾಗಿಲಲ್ಲೇ ತೆರಿಗೆ ಪಾವತಿ ತಂತ್ರಾಂಶ ಅಭಿವೃದ್ಧಿ | ಗ್ರಾಮಗಳಲ್ಲಿ ಜಾರಿಯಾಗಲಿದೆ ನೂತನ ತಂತ್ರಾಂಶ |

December 6, 2022
9:47 PM

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ  ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ‌. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.

Advertisement
Advertisement
Advertisement
Advertisement
ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮತ್ತು ಎಲ್ಲಾ ಆಸ್ತಿಗಳಿಗೂ ಇದರಲ್ಲಿ ನಿಖರವಾದ ತೆರಿಗೆ ಮಾಹಿತಿ ಒಳಗೊಳ್ಳುವುದರಿಂದ ಹಾಗೂ ಉತ್ತರದಾಯಿತ್ವ ಕಾಪಾಡುವ ಉದ್ದೇಶದಿಂದ ಪಂಚತಂತ್ರ ಮೊಬೈಲ್ ಆಪ್ ಸಿದ್ಧಪಡಿಸಲಾಗುತ್ತಿದೆ.‌ ಗ್ರಾಮದಲ್ಲಿ ಪಂಚಾಯತ್ ವ್ಯಾಪ್ತಿಗೆ ಬರುವ ಆಸ್ತಿ, ಎಷ್ಟು ತೆರಿಗೆ ವಿಧಿಸಬೇಕು, ಕಟ್ಟಡ, ಖಾಲಿ ನಿವೇಶನ, ಆಯಕಟ್ಟಿನ ಜಾಗ, ಮೌಲ್ಯ ಮತ್ತು ಬಳಕೆಗೆ ತಕ್ಕಂತೆ ಎಲ್ಲಾ ಆಸ್ತಿಗಳಿಗೂ ತೆರಿಗೆ ದರದ ನಿಖರವಾದ ಮಾಹಿತಿ ಇದರಲ್ಲಿ ಇರಲಿದೆ.‌

Advertisement

ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.‌

ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror