ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಬಾಗಿಲಲ್ಲೇ ತೆರಿಗೆ ಪಾವತಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚತಂತ್ರ ಮೊಬೈಲ್ ಆಪ್ ಸಿದ್ದಪಡಿಸುತ್ತಿದ್ದು, ಶೀಘ್ರದಲ್ಲಿಯೇ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ತೆರಿಗೆ ಸಂಗ್ರಹಿಸಲಿದ್ದಾರೆ.
ಜನತೆಗೆ ಗೊಂದಲವಿಲ್ಲದಂತೆ ತೆರಿಗೆ ಪಾವತಿಸಲು ಅನುಕೂಲವಾಗಲಿದ್ದು, ಆನ್ಲೈನ್ ನಲ್ಲಿ ತೆರಿಗೆ ಪಾವತಿಸಬಹುದು. ಡೆಬಿಟ್ ಕಾರ್ಡ್ ಸ್ವೈಪ್ ಮಾಡಲು ಕೂಡ ಅವಕಾಶ ಕಲ್ಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್ ಪಿಒಎಸ್ ಯಂತ್ರ ನೀಡಲು ಕ್ರಮ ಕೈಗೊಳ್ಳಲಾಗಿದೆ.
ರಶೀದಿ ಕೂಡ ಸಿಗಲಿದ್ದು, ಮೊಬೈಲ್ ಗೆ ಮೆಸೇಜ್ ರವಾನೆ ಸೌಲಭ್ಯವೂ ಇರಲಿದೆ. ರಾಜ್ಯದ 5659 ಗ್ರಾಮ ಪಂಚಾಯತ್ ಗಳಲ್ಲಿ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…