ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಹಾಗೂ ವಿಜಯ ಗ್ರಾಮ ಅಭಿವೃದ್ಧಿ ಸಮಿತಿ ನಾಲ್ಕೂರು ಇವರ ಸಹಯೋಗದೊಂದಿಗೆ 3 ದಿನದ ಕೌದಿ ಕೌಶಲ್ಯ ತರಬೇತಿ ಕಾರ್ಯಕ್ರಮ ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉದ್ಘಾಟನೆಗೊಂಡಿದೆ.
ತರಬೇತಿ ಕಾರ್ಯಕ್ರಮದಲ್ಲಿ ಗುತ್ತಿಗಾರು, ದೇವಚಳ್ಳ,ಉಬರಡ್ಕ,ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರ ,ಅಜ್ಜಾವರ, ಮಡಪ್ಪಾಡಿ ಸೇರಿದಂತೆ 7 ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟಗಳ ಸದಸ್ಯರು, ಹಾಗೂ ಕಿಶೋರಿಯರು MBK, LCRP, ಸಖಿ ಗುತ್ತಿಗಾರು ಗ್ರಂಥಾಲಯ ಗ್ರಂಥಪಾಲಕಿ ಹಾಜರಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನಾಲ್ಕೂರು ಉಪ ವಲಯ ಅರಣ್ಯಾಧಿಕಾರಿ ಸದಾಶಿವ ಸಿಂಧಿಗಾರ್ ನೆರವೇರಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ನಾಲ್ಕೂರು ಅಧ್ಯಕ್ಷ ಉದಯಕುಮಾರ್ ಡಿ. ಆರ್,ಕಾರ್ಯದರ್ಶಿ ದಿನೇಶ್ ಹಾಲೆಮಜಲು , ಅಮರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದಿವ್ಯ ಸುಜನ್ ಗುಡ್ಡೆಮನೆ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ವೇತ, ತರಬೇತಿ ಸಂಪನ್ಮೂಲ ವ್ಯಕ್ತಿ ಮನೋರಮಾ ಮುಚ್ಚಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಸ್ವಾಗತಿಸಿ ನೀಲಾವತಿ ಮೊಗ್ರ ಪ್ರಾರ್ಥಿಸಿ,ಲತಾ ಆಜಡ್ಕ ವಂದಿಸಿದರು. ಒಕ್ಕೂಟದ ಕಾರ್ಯದರ್ಶಿ ಯಮಿತ ಪೂರ್ಣಚಂದ್ರ ಪೈಕ ಮತ್ತು ಶಿಶಿಮ ಜಾಕೆ ಕಾರ್ಯಕ್ರಮ ನಿರೂಪಿಸಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…