ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಕರೆ ನೀಡಿದ್ದಾರೆ. ಸಂಜೀವಿನಿ ಯೋಜನೆ ಸಮುದಾಯ ಬಂಡವಾಳ ನಿಧಿ ಹಾಗೂ ಸುತ್ತು ನಿಧಿ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರವು ಮಹಿಳಾ ಸಬಲೀಕರಣಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

