ಆ.5 ರಂದು ಚೆನ್ನೈ ನ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ವಾರಗಳ ಹಿಂದೆ ಚೇತರಿಕೆ ಕಂಡಿದ್ದ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಶುಕ್ರವಾರ ಮಧ್ಯಹ್ನದ ವೇಳೆ ಕೊನೆಯುಸಿರೆಳೆದರು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು 1946 ಜೂ.4 ರಂದು ಜನಿಸಿದ್ದರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಗಾಯನ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದರು.
ಕನ್ನಡದ ಟಿವಿ ವಾಹಿನಿಯಲ್ಲಿ ಎಸ್ ಪಿ ಬಿ ನಡೆಸಿಕೊಡುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಬಹು ಜನಪ್ರಿಯವಾಗಿತ್ತು.
ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳೂ ಸೇರಿದಂತೆ ಎಸ್ ಪಿ ಬಾಲಸುಬ್ರಹ್ಮಣ್ಯಂ ಒಟ್ಟು ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲಸುಬ್ರಹ್ಮಣ್ಯಂ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರಿಗೆ ಲಭ್ಯವಾಗಿದೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…