ನಮ್ಮ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸುಧಾರಿಸಲಿ | ಅಭಿಮಾನಿಗಳ ಪ್ರಾರ್ಥನೆ

September 25, 2020
12:25 PM

ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ.  ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.

ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ  ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ  ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ ,  ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ  ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror