ಕೊರೋನಾ ಸೋಂಕಿಗೆ ಒಳಗಾಗಿದ್ದ ಬಹುಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸುಧಾರಿಸಲಿ ಎಂದು ಲಕ್ಷಾಂತರ ಅಭಿಮಾನಿಗಳು ಮತ್ತೆ ಪ್ರಾರ್ಥನೆ ನೆರವೇರಿಸುತ್ತಿದ್ದಾರೆ.
ಚೆನ್ನೈನ ಎಂಜಿಆರ್ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಶ್ವಾಸಕೋಶ, ಉಸಿರಾಟಕ್ಕೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಸಹಾಯಕ ನಿರ್ದೇಶಕಿ ಡಾ. ಅನುರಾಧಾ ಭಾಸ್ಕರನ್ , ಆಗಸ್ಟ್ 5ರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದೇಹಾರೋಗ್ಯ ಸ್ಥಿತಿ ಕಳೆದ 24 ಗಂಟೆಗಳಲ್ಲಿ ತೀರಾ ಹದಗೆಟ್ಟಿದೆ. ಅವರನ್ನು ಇನ್ನಷ್ಟು ಜೀವನಾಧಾರ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಆದರೆ, ಅವರ ಸ್ಥಿತಿ ತೀರಾ ಗಂಭೀರವಾಗಿದೆ. ಎಂಜಿಎಂ ಹೆಲ್ತ್ ಕೇರ್ ನ ಪರಿಣತ ವೈದ್ಯರ ತಂಡ ಅವರ ದೇಹಸ್ಥಿತಿಯನ್ನು ನಿಕಟವಾಗಿ ನಿಗಾ ವಹಿಸುತ್ತಿದೆ ಎಂದು ಆಸ್ಪತ್ರೆ ಬುಲೆಟಿನ್ ನಲ್ಲಿ ತಿಳಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಎಸ್ ಪಿಬಿ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿತ್ತು. ಆದರೆ, ಆಗಸ್ಟ್ 23ರಂದು ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ.ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ತೀವ್ರ ವಾಗಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಎಂಜಿಎಂ ಹೆಲ್ತ್ ಕೇರ್ ನ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸುತ್ತಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್.ಪಿ. ಚರಣ್ ಸಾಮಾಜಿಕ ಜಾಲತಾಣದಲ್ಲಿ ತಂದೆಯವರ ಆರೋಗ್ಯ ಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರು ಶೀಘ್ರವೇ ಮನೆಗೆ ಮರಳಲು ಕಾತರದಿಂದ ಇದ್ದೇವೆ ಎಂದು ಹೇಳಿದ್ದಾರೆ.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…