ಅರಂತೋಡು-ತೊಡಿಕಾನ ಸಹಕಾರಿ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

October 3, 2020
4:56 PM

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅ.3ರಂದು ಭೇಟಿ ನೀಡಿದರು .

ಕುಶಾಲನಗರದಿಂದ ಹೊರಟು ಕಾರ್ಯಕ್ರಮ ನಿಮಿತ್ತ ಪುತ್ತೂರಿಗೆ ಬರುತ್ತಿದ್ದ ಸಚಿವರನ್ನು ಅರಂತೋಡಿನಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ,ಉಪಾಧ್ಯಕ್ಷ ದಯಾನಂದ ಕುರುಂಜಿ, ಸಹಕಾರಿ ಸಂಘದ ಉಪನಿಬಂಧಕ ಪ್ರವೀಣ್ ನಾಯಕ್, ಸುಳ್ಯ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಸಹಕಾರಿ ಸಂಘಗಳ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ಸಹಕಾರಿ ಸಂಘದ ವತಿಯಿಂದ ನಡೆಸಲಾಗುತ್ತಿರುವ ಸಮೃದ್ಧಿ ಮಾರ್ಟ್ ಗೆ ಭೇಟಿ ನೀಡಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ಯೂನಿಯನ್ ಸಂಘದ ಅಧ್ಯಕ್ಷ ರಮೇಶ್ ದೇಲಂಪಾಡಿಯವರ ನೇತೃತ್ವದ ತಂಡದಿಂದ ಸಾಲಮನ್ನಾ ಸೇರಿದಂತೆ ಇನ್ನಿತರ ಅಗತ್ಯ ಬೇಡಿಕೆಗಳ ಮನವಿಯನ್ನು ಸಚಿವರಲ್ಲಿ ಸಲ್ಲಿಸಿದರು. ವಸಂತ ಭಟ್ ತೊಡಿಕಾನ ಅವರು ತಾಳೆಬೆಳೆಗೆ ಉತ್ತೇಜನದ ಬಗ್ಗೆ ಮನವಿ ಸಲ್ಲಿಸಿದರು.

ಅಡಿಕೆ ಹಳದಿರೋಗ ಹಾಗೂ ಈ ಭಾಗದ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಸುಳ್ಯ ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅವರು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸುದೇವ ನಾಯಕ್, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿಷ್ಣು ಭಟ್, ಬಿಜೆಪಿ ನಾಯಕರಾದ ಹರೀಶ್ ರೈ ಉಬರಡ್ಕ, ಸಹಕಾರಿ ಸಂಘದ ನಿರ್ದೇಶಕರಾದ ವಿನೋದ್, ಕುಸುಮಾಧರ, ಕೇಶವ, ವಿಜೇತ್ ಮರುವಳ, ಅರಂತೋಡು ಹಾಲು ಉತ್ಪದಕರ ಸಂಘದ ಉಪಾಧ್ಯಕ್ಷೆ ಭಾರತಿ ಉಳುವಾರು, ಬಿಜೆಪಿ ಮಹಿಳಾ ಮೋರ್ಚಾ ಸಮಿತಿ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ ಉಳುವಾರು,ಕಿಶೋರ್ ಕುಮಾರ್ ಉಳುವಾರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror