Advertisement
ಕೃಷಿ

“ಸಹ್ಯಾದ್ರಿ ಸಿಂಧೂರ” | ಶಿವಮೊಗ್ಗ ಕೃಷಿ ವಿವಿಯಿಂದ ಹೊಸ ಭತ್ತದ ತಳಿ

Share

ರೈತರಿಗೆ ಅಧಿಕ ಇಳುವರಿ ಹಾಗೂ ಮಧುಮೇಹಿಗಳಿಗೆ ಸಕ್ಕರೆ ಅಂಶ ಕಡಿಮೆ ಇರುವ ಭತ್ತದ ಹೊಸ ತಳಿಯಾದ ಕೆಂಪು ಭತ್ತವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ‘ಸಹ್ಯಾದ್ರಿ ಸಿಂಧೂರ’ ಎಂಬ ನೂತನ ಕೆಂಪು ಸಣ್ಣ ಭತ್ತವನ್ನು ಪರಿಚಯಿಸಿಕೊಟ್ಟಿದೆ.

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕೃಷಿ ಮೇಳದಲ್ಲಿ ಸಹ್ಯಾದ್ರಿ ಸಿಂಧೂರ ತಳಿಯ ಭತ್ತವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದ್ದಾರೆ. ಈಗಾಗಲೇ ಅನೇಕ ಕೆಂಪು ತಳಿಯ ಭತ್ತಗಳಿವೆ. ಆದರೆ, ಈ ಸಹ್ಯಾದ್ರಿ ಸಿಂಧೂರ ತಳಿಯ ಅಕ್ಕಿಯು ಇತರ ಕೆಂಪು ತಳಿಯ ಭತ್ತಕ್ಕಿಂತ ವಿಭಿನ್ನವಾಗಿದೆ. ಇದು ಸಣ್ಣ ಕೆಂಪು ಭತ್ತವಾಗಿದ್ದು, ಇದನ್ನು ಎಲ್ಲರೂ ಸಹ ಊಟಕ್ಕೆ ಬಳಸಬಹುದು.
ಈ ಭತ್ತವನ್ನು ರಾಜ್ಯಾದ್ಯಂತ 40 ಕೇಂದ್ರಗಳಲ್ಲಿ ಪ್ರಯೋಗಿಸಲಾಗಿದ್ದು, ಅತ್ಯಂತ ಯಶಸ್ವಿಯಾಗಿ ಇಳುವರಿ ಬಂದಿದೆ. ಇದು ಒಂದು ಹೆಕ್ಟೇರ್‍ಗೆ 55 ಕ್ವಿಂಟಾಲ್ ಬರುತ್ತದೆ. ಮಲೆನಾಡಿನಲ್ಲಿ ಒಂದು ಹೆಕ್ಟೇರ್ ಗೆ 22 ಕ್ವಿಂಟಾಲ್ ಇಳುವರಿ ಸಿಗುತ್ತದೆ.ಇದರ ಇನ್ನೊಂದು ವಿಶೇಷತೆಯೆಂದರೆ,ಇದು 120 ದಿನದಲ್ಲೇ ಕಟಾವಿಗೆ ಬರುತ್ತದೆ. ಅಲ್ಲದೆ, ಎರಡು ಬೆಳೆಗಳಾಗಿ ಬೆಳೆಯಬಹುದು. ಇದಕ್ಕೆ ಯಾವುದೇ ರೋಗಭಾಧೆಯು ಬಹುಬೇಗ ತಗಲುವುದಿಲ್ಲ. ಇದರಲ್ಲಿ ಕೀಟವೂ ಇರುವುದಿಲ್ಲ. ಪ್ರೋಟೀನ್, ಐರನ್ ಜಿಂಕ್ ಅಂಶವನ್ನು ಹೆಚ್ಚಾಗಿ ಹೊಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

6 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

7 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

7 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

7 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

22 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago