Advertisement
MIRROR FOCUS

ಎಂ.ಬಿ.ಎ ಮುಗಿಸಿ ಕೃಷಿಗೆ ಮರಳಿದ ಯುವಕ | ಮೇಕೆ ಸಾಕಾಣಿಕೆಯಿಂದ ಲಾಭ ಗಳಿಸಿದ ರೈತ |

Share

ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಕೃಷಿಗೆ ಮರಳಿ ಯಶಸ್ಸು ಕಂಡಿದ್ದಾರೆ.ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಈಗ ಆದರ್ಶ ಕೃಷಿನಾಗಿದ್ದಾರೆ.

ಮೂಲತಃ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯ ನಿವಾಸಿಯಾದ ಸಾಯಿನಾಥ್ ಶೇರಖಾನ್ ಎಂ.ಬಿ.ಎ ಮುಗಿಸಿ ಬೆಂಗಳೂರಿನಲ್ಲಿ ಕಾರ್ಪೊರೇಟ್ ಕಂಪೆನಿಯಲ್ಲಿ ಎಚ್.ಆರ್ ಆಗಿ ಕೆಲಸ ಮಾಡುತ್ತಿದ್ದರು. ತಿಂಗಳಿಗೆ 40 ಸಾವಿರ ಸಂಬಳವನ್ನು ಪಡೆಯುತ್ತಿದ್ದರು. ಕೃಷಿ ಅವರ ಆಸಕ್ತಿಯ ವಿಷಯವಾಗಿತ್ತು. ಹೀಗಾಗಿ ಕೆಲಸವನ್ನು ಬಿಟ್ಟು ಮರಳಿ ಊರಿಗೆ ಬಂದು ಈಗ ಯುವಜನಾಂಗಕ್ಕೆ ಮಾದರಿ ರೈತನಾಗಿದ್ದಾರೆ.

ತನ್ನ ಎಂಟು ಎಕರೆ ಜಮೀನಿನಲ್ಲಿ 6 ಎಕರೆಯಷ್ಟು ಕಬ್ಬು ಹಾಗೂ ಉಳಿದ ಎರಡು ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆಸಿ  ಆಡು ಸಾಕುತ್ತಿದ್ದಾರೆ. ಒಂದು ತಿಂಗಳ ಆಡು ಮರಿಗೆ 16 ರಿಂದ 20 ಸಾವಿರ ಹಣ ಕೊಟ್ಟು ಖರೀದಿ ಮಾಡಿಕೊಂಡು ಹೋಗುತ್ತಾರೆ. ಜಿಲ್ಲೆಯ ರೈತರು ಮಾತ್ರವಲ್ಲ ಮಹಾರಾಷ್ಟ್ರ ರಾಜ್ಯದ ರೈತರು ಸಹಿತ ಸಾಯಿನಾಥ್ ಬಳಿಯಿಂದ ಆಡು ಖರೀದಿ ಮಾಡುತ್ತಾರೆ.

ತಿಂಗಳಿಗೆ ನಲವತ್ತು ಸಾವಿರ ಪಡೆಯುತ್ತಿದ್ದ ಸಾಯಿನಾಥ್ ಶೇರಖಾನ್ ಅವರು ಈಗ ಒಂದು ವರ್ಷದಲ್ಲಿ ಆಡುಗಳಿಂದ ಸುಮಾರು 10 ರಿಂದ 14 ಲಕ್ಷದಷ್ಟು ಆದಾಯ ಗಳಿಸುತ್ತಿದ್ದಾರೆ. ಇವರ ಈ ಮಾದರಿಯಿಂದ ಹಲವಾರು ಯುವ ರೈತರು ಸಹ ಪ್ರೇರಣೆಯನ್ನು ಪಡೆದು ಬದುಕಲು ನೂರು ದಾರಿಯಿದೆ ಛಲವಿದ್ದರೆ ಸಾಕು ಎನ್ನುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

2 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

9 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

9 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

9 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

19 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago