ಹುಣಸೆಹಣ್ಣು ಉದ್ಯಮಶೀಲರಿಗೆ ಕೊಯ್ಲು, ಸಂರಕ್ಷಣೆ ಹಾಗೂ ಮಾರಾಟ ಕುರಿತ ಮೂರು ದಿನದ ತರಬೇತಿ ಕಾರ್ಯಗಾರಕ್ಕೆ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಯಚಂದ್ರ, ಬೆಂಗಳೂರಿನಲ್ಲಿ ಐಟಿಬಿಟಿಗೆ ಸಂಬಂಧಿಸಿದ ನವೋದ್ಯಮಗಳು 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿವೆ. ಈ ಮೂಲಕ ಹೊಸ ಹೊಸ ಸಂಶೋಧನೆಗೆ ಹೆಚ್ಚಿನ ಒತ್ತು ನೀಡುತ್ತಿವೆ. ಅದೇ ರೀತಿ ಹುಣಸೆಹಣ್ಣು ಬೆಳೆ ಕೊಯ್ಲು, ಸಂರಕ್ಷಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ರೈತರಿಗೆ ಸಕಾಲದಲ್ಲಿ ಮಾಹಿತಿ ನೀಡಿದಾಗ, ಹುಣಸೆಹಣ್ಣು ಬೆಳೆಗಾರರೂ ಕೂಡ ಈ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತದ ಅಧ್ಯಕ್ಷ , ಬಿ.ಎಚ್. ಹರೀಶ್ ಮಾತನಾಡಿ, ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಹಾಗೂ ಅದಕ್ಕೆ ಸೂಕ್ತ ಬೆಲೆ ಸಿಕ್ಕರೆ ಇನ್ನಷ್ಟು ಮಂದಿ ಹುಣಸೆಹಣ್ಣು ಬೆಳೆಯುವ ಕೆಲಸದಲ್ಲಿ ನಿರತರಾಗುತ್ತಾರೆ ಆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
ಈ ವೇಳೆ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್.ಕೆ. ಶಿವಕುಮಾರ್, ಡಾ.ಎಂ.ಎಚ್.ಎಂ ಪ್ರತಿಷ್ಠಾನದ ಅಧ್ಯಕ್ಷ ಡಾ. ಕೆ. ನಾರಾಯಣಗೌಡ, ಟ್ರಸ್ಟಿ ಡಾ.ಎಸ್.ವಿ. ಹಿತ್ತಲಮನಿ, ಕಾರ್ಯದರ್ಶಿ ಡಾ.ಎಲ್. ಹನುಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…