ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಹಾರಾಷ್ಟ್ರ, ಮಧ್ಯಪ್ರದೇಶದಿಂದ ಖರೀದಿಸಲಾದ ಈರುಳ್ಳಿಯನ್ನು ಬೆಂಗಳೂರಿನಲ್ಲಿ 15 ಸಂಚಾರಿ ವಾಹನಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ , 112 ಸಂಚಾರಿ ವಾಹನಗಳ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುವ ಗುರಿಯಿದೆ ಎಂದರು. ಎನ್ ಸಿಸಿಎಫ್ ಸಿಬ್ಬಂದಿ ಮಂಜುನಾಥ್, ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಕೆ.ಜಿ.ಗೆ 35 ರೂಪಾಯಿಯಂತೆ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel