ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯವಾಗಿದೆ. ಪ್ರಸಕ್ತ ಮುಂಗಾರಿನಲ್ಲಿ ಕಳಪೆ ಬೀಜಗಳ ಮಾರಾಟದಿಂದ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ 639 ರೈತರಿಗೆ 58 ಲಕ್ಷ ರೂಪಾಯಿ ವಂಚನೆಯಾಗಿದ್ದು, ರಾಣೆಬೆನ್ನೂರು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಇರುವ ನಿಸರ್ಗ ಸೀಡ್ಸ್ ಕಂಪನಿಯವರು ರೈತರಿಗೆ ಮಾರಿದ್ದ ಮೆಕ್ಕೆಜೋಳದ ಬೀಜಗಳು ಕಳಪೆ ಎಂಬುದನ್ನು ಕೃಷಿ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಬೀಜ ತಯಾರಿಸಿದ್ದ ಕಂಪನಿಯ ಮಾಲೀಕರು ಹಾಗೂ ಬೀಜ ಮಾರಿದ್ದ ಮಳಿಗೆಗಳ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…