ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಪಲ್ಯ

October 11, 2025
7:30 AM

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಪಲ್ಯಕ್ಕೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 1 ಕಪ್
ಬಿಸಿ ನೀರಿನಲ್ಲಿ ಹಾಕಿ ಇಡಿ,  ನಂತರ ಚೆನ್ನಾಗಿ ತೊಳೆದು ತೆಳ್ಳಗೆ ಕಟ್ ಮಾಡಿ. ನೀರಿನಲ್ಲಿ ಹಾಕಿ ತೆಗೆಯಿರಿ.

ಮಾಡುವ ವಿಧಾನ : ಫ್ರೈ ಮಾಡಲು ಕೊತ್ತಂಬರಿ ಬೀಜ 1 ಚಮಚ, ಜೀರಿಗೆ 1 ಚಮಚ, ಕೆಂಪು ಮೆಣಸು 2, ಹಾಕಿ ಫ್ರೈ ಮಾಡಿ ನಂತರ ತರಿ ತರಿಯಾಗಿ ರುಬ್ಬಿಕೊಳ್ಳಿ.  ಬಾಣಲೆಗೆ ಎಣ್ಣೆ, ಸಾಸಿವೆ, ಕರಿಬೇವಿನ ಸೊಪ್ಪು, ಕೆಂಪು ಮೆಣಸು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಹಲಸಿನ ಕಾಯಿ , ನೀರು, ಮೆಣಸಿನ ಪುಡಿ 1/2 ಚಮಚ, ಅರಿಸಿನ ಪುಡಿ 1/2 ಚಮಚ , ಬೆಲ್ಲ ಚಿಕ್ಕ ತುಂಡು,, ಹಾಕಿ ಬೇಯಿಸಿಕೊಳ್ಳಿ.  ನಂತರ ರುಬ್ಬಿದ ಪುಡಿ, ಕಾಯಿತುರಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ. ಇದಕ್ಕೆ ಉಪ್ಪು ಹಾಕುವ ಅಗತ್ಯವಿಲ್ಲ.ಬಿಸಿ ಬಿಸಿಯಾದ ಅನ್ನದ ಜೊತೆ ತುಪ್ಪ ಹಾಕಿ ತಿನ್ನಲು ತುಂಬಾ ರುಚಿಯಾಗಿರುತ್ತದೆ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror