ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ನಾಗಮಂಗಲ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಏಳನೇ ತರಗತಿಯ ಸಮರ್ಥ ಭಟ್ ತೃತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯನಿಯವರು, ಶಿಕ್ಷಕವೃಂದ ಅಭಿನಂದನೆಯನ್ನು ಸಲ್ಲಿಸಿರುತ್ತದೆ. ಸಮರ್ಥ ಭಟ್ ಅವರು ಕೊಕ್ಕಡದ ಡಾ.ಗಣೇಶ್ ಪ್ರಸಾದ್ ಹಾಗೂ ಜ್ಯೋತಿ ದಂಪತಿಗಳ ಪುತ್ರ. ಸಮರ್ಥ ಭಟ್ ಅವರು ಪುತ್ತೂರಿನ ಜೀನಿಯಸ್ ಚೆಸ್ ಸ್ಕೂಲ್‌ನ ಸತ್ಯಪ್ರಸಾದ್ ಕೋಟೆ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

