ಸಂಪಾಜೆ | ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನಾ ಜಾಗೃತಿ ಕಾರ್ಯಕ್ರಮ

March 17, 2022
2:16 PM

ಕೊಡಗು ಸಂಪಾಜೆ ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಹಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯಕ್ರಮ ಏರ್ಪಡಿಸಲಾಯಿತು.

Advertisement

ಸಮಾರಂಭದ ಅಧ್ಯಕ್ಷತೆಯೊಂದಿಗೆ ಸಮಾರಂಭವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ನಿರ್ಮಲ ಭರತ್ ಉದ್ಘಾಟನೆಯನ್ನು ಮಾಡಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ  ಶೀಲಾ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಇರ್ಷಾದ್, ಬಾಲ ಕಾರ್ಮಿಕ ಅಧಿಕಾರಿ ಶಿರಾಜ್ ಅಹಮ್ಮದ್, ಸ್ತ್ರೀ ಶಕ್ತಿ ತಾಲೋಕು ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ, ತಾಲೂಕು ಸದಸ್ಯೆ ರೂಪಾ ರಮೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಶೋಭಾರಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ ಮತ್ತು  ಕುಮಾರ್ ಚೆದ್ಕಾರ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಅರಣ್ಯ ಶಾಸ್ತ್ರ ಎಂ ಎಸ್ಸಿ ಯಲ್ಲಿ ವಿಶ್ವವಿದ್ಯಾನಿಲಯದ ಚಿನ್ನದ ಪದಕವನ್ನು ರಾಜ್ಯಪಾಲರಿಂದ ಪಡೆದಿರುವ ಸಂಪಾಜೆ ಗ್ರಾಮದ ಮಂಗಳಪಾರೆ ಶೋಭಾನಾರಾಯಣ ರವರ ಪುತ್ರ ಅಶ್ವಥ್ ಎಂ ಎನ್ ಇವರಿಗೆ ಸನ್ಮಾನಿಸಲಾಯಿತು.
ಸಮಾರಂಭವನ್ನು ಸಂಪಾಜೆ ಗ್ರಾಮದ ಎಲ್ಲಾ ಆಂಗನವಾಡಿ ಕಾರ್ಯಕರ್ತೆಯರು ನಡೆಸಿಕೊಡುವುದರೊಂದಿಗೆ ಸಂಪಾಜೆ ಗ್ರಾಮದ ಎಲ್ಲಾ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಪಂಚಾಯತ್ ಸಿಬ್ಬಂದಿವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

 

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!
July 3, 2025
2:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?
July 3, 2025
12:35 PM
by: ಸಾಯಿಶೇಖರ್ ಕರಿಕಳ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ
ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ
July 3, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group