ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

Advertisement

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.

Advertisement

ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ  ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ  ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.

Advertisement
Advertisement
Advertisement

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ  ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ  ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ"

Leave a comment

Your email address will not be published.


*