ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ ,ಸಾಲ ಮರುಪಾವತಿ ,ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ ,ಈ ಪ್ರಶಸ್ತಿಯನ್ನು ನೀಡಲಾಗಿದೆ.
ರಾಜ್ಯ ಅಪೆಕ್ಸ್ ಬ್ಯಾಂಕ್ ನ ನಿರ್ದೇಶಕರೂ ,ಕೊಡಗು ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷರು ಆದ ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅದ್ಯಕ್ಷರಾದ ಅನಂತ್ ಊರುಬೈಲು ಅವರಿಗೆ ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ರಾಜಾರಾಮ ಕಳಗಿ ,ಕಾರ್ಯನಿರ್ವಹಣಾಧಿಕಾರಿ ಆನಂದ ಬಿ.ಕೆ ,ನಿರ್ದೇಶಕ ರಾಮಮೂರ್ತಿ ಉಂಬಳೆ ಉಪಸ್ಥಿತರಿದ್ದರು. ಸಂಪಾಜೆ ಪಯಸ್ವಿನಿ ಸಹಕಾರ ಸಂಘ ಕಳೆದ ಎರಡು ವರ್ಷಗಳಲ್ಲಿ ತನ್ನ ಅಭಿವೃದ್ಧಿ ಮತ್ತು ದಕ್ಷ ಕಾರ್ಯನಿರ್ವಣೆಗಾಗಿ ಸತತ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ,ಸಂಘದ ಸದಸ್ಯರ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…