ಸಂಪಾಜೆಯಲ್ಲಿ ಆಟಿ ಕೂಟ | ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ

August 4, 2025
7:09 PM

ಸಂಪಾಜೆ ಗ್ರಾಮ ಪಂಚಾಯತ್ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸ್ತ್ರೀ ಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ಇದರ ಜಂಟಿ ಆಶ್ರಯದಲ್ಲಿ ಆಟಿ ಕೂಟ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರು, ಚಿಂತಕರಾದ ಚಿದಾನಂದ ಮಾಸ್ಟರ್ ಚೆನ್ನೆಮಣೆ ಆಟ ಆಡುವ ಮೂಲಕ ಉದ್ಘಾಟಿಸಿದರು.ಆರೋಗ್ಯ, ಶಿಕ್ಷಣ ಅಧಿಕಾರಿ ಪ್ರಮೀಳಾ ಸ್ವಚ್ಛತೆ, ಆರೋಗ್ಯ ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಸೊಸೈಟಿ ಉಪಾಧ್ಯಕ್ಷರಾದ ಯಮುನಾ ಬಿ. ಎಸ್, ಸೊಸೈಟಿ ನಿರ್ದೇಶಕರಾದ ಜಿ. ಕೆ. ಹಮೀದ್ ಗೂನಡ್ಕ, ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಸುಂದರಿ ಮುಂಡಡ್ಕ, ನಿವೃತ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ), ನಿಕಟ ಪೂರ್ವ ಎಲ್. ಸಿ. ಆರ್. ಪಿ. ಯಶೋಧ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಎಲ್ ಸಿ ಆರ್ ಪಿ ಸೌಮ್ಯ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ದೀಪಿಕಾ ಪೋಕ್ಸೋ ಲಿಂಗತ್ವ ಆಧಾರಿತ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಎನ್ ಆರ್ ಎಲ್ ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ವೇತಾ, ಸಂಜೀವಿನಿ ಅಕ್ಕ ಕೆಫೆ, ನಲ್ ಜಲ್ ಮಿತ್ರ, ಒಕ್ಕೂಟದ ಎಲ್ಲಾ ಸಿಬ್ಬಂದಿಗಳ ಕಾರ್ಯ ಚಟುವಟಿಕೆಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬಂದು ಕೆಲಸ ಮಾಡಿದಾಗ ಮಹಿಳೆಯರು ಸಂಘಟಿತರಾದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಉಪಾಧ್ಯಕ್ಷರಾದ ಎಸ್. ಕೆ. ಹನೀಫ್, ವಲಯ ಮೇಲ್ವಿಚಾರಕರಾದ ಮಹೇಶ್ ,ಕೌಶಲ್ಯ ತರಬೇತಿಯ ರೂಪ, ಪಂಚಾಯತ್ ರಾಜ್ ಮೇಲ್ವಿಚಾರಕಿ ಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭಾಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ದೇವಕಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಮಲಾ ಪ್ರಸಾದ್, ರಜನಿ ಶರತ್, ಅನುಪಮ, ಲಿಸ್ಸಿ ಮೊನಾಲಿಸಾ, ನಿಕಟ ಪೂರ್ವ ಒಕ್ಕೂಟದ ಅಧ್ಯಕ್ಷರಾದ ಶಿಲ್ಪಾ ಸನತ್, ಕಾರ್ಯದರ್ಶಿ ಕವಿತಾ ಪೆರಂಗೋಡಿ ಒಕ್ಕೂಟದ ಕಾರ್ಯದರ್ಶಿ ಲಲನ, ಸಂಜೀವಿನಿ, ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯೆಯರು ಹಾಗೂ ಆಲೆಟ್ಟಿ ಕೃಷಿ ಸಖಿ ಲೋಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಚೈತ್ರಾ, ಹರ್ಷಿತಾ, ಆಶಾ ಕಾರ್ಯಕರ್ತೆಯಾರಾದ ಸವಿತಾ ರೈ, ಸೌಮ್ಯ, ಮೋಹನಾಂಗಿ, ಆಶಾ ವಿನಯ ಕುಮಾರ್  ಆರೋಗ್ಯ ತಪಾಸಣೆ ನಡೆಸಿದರು. ಮೋಹಿನಿ ವಿಶ್ವನಾಥ್ (ನಿಶಾ) ಸ್ವಾಗತಿಸಿ ಕಾಂತಿ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು. ಸಂಘಗಳ ಸದಸ್ಯೆಯರು ವಿವಿಧ ಖಾದ್ಯ ತಯಾರಿ ಮಾಡಿ ತಂದಿದ್ದರು. ರುಚಿ ಶುಚಿಯಾದ ಖಾದ್ಯಗಳನ್ನು ತಯಾರಿಸಿ ತಂದಿರುವ ಎಲ್ಲಾ ಸಂಘಗಳಿಗೆ ಬಹುಮಾನ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror