ಗ್ರಾಮಕಲ್ಯಾಣದ ಬಗ್ಗೆ ಯೋಚಿಸುತ್ತಾ, ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಸತತವಾಗಿ 3 ಬಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿ, ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯ ಅಭಿವೃದ್ಧಿಯ ಹರಿಕಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಕಳಗಿ ಇವರ ಸ್ಮರಣಾರ್ಥ ಸಂಪಾಜೆಯ ಆದರ್ಶ ಫ್ರೆಂಡ್ಸ್ ಚೆಡಾವು ಇವರ ಆಶ್ರಯದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು.
ಶನಿವಾರ ಬೆಳಗ್ಗೆ ಸಂಪಾಜೆ ಪಯಶ್ವಿನಿ ಸಹಕಾರಿ ಸಂಘದ ಬಾಲಚಂದ್ರ ಕಳಗಿ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೆಂಕಪ್ಪ ಕಳಗಿ ಇವರು ಉದ್ಘಾಟಿಸಿದರು. ಆದರ್ಶ ಪ್ರೆಂಡ್ಸ್ ಚೆಡಾವು ಇದರ ಅಧ್ಯಕ್ಷರಾದ ಉದಯ ಹನಿಯಡ್ಕ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಬಿಜೆಪಿ ಮಡಿಕೇರಿ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಸುಬ್ರಮಣಿ, ಗ್ರಾಮ ಪಂಚಾಯತ್ ಸಂಪಾಜೆ ಕೊಡಗು ಅಧ್ಯಕ್ಷೆ ನಿರ್ಮಲಾ ಭರತ್, ಪಯಶ್ವಿನಿ ಸಹಕಾರಿ ಸಂಘ ಸಂಪಾಜೆ ಅಧ್ಯಕ್ಷ ಅನಂತ ಎನ್.ಸಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶ್ರೀ ಜಯಾನಂದ ಸಂಪಾಜೆ ಮತ್ತು ಕೊರೊನಾ ವಾರಿಯರ್ಸ್ ಆಗಿ ಶ್ರಮಿಸಿದ ಲೀಲಾಧರ ನೂಜೆಲು ಇವರನ್ನು ಸನ್ಮಾನಿಸಲಾಯಿತು.
ಲೀಲಾವತಿ ಕಲಾಯಿ ಇವರ ಪ್ರಾರ್ಥನೆ ಹಾಡಿದರು. ಯಶೋಧರ ಬಿ ಜೆ ಸ್ವಾಗತಿಸಿದರು, ನಿರಂತ್ ದೇವಸ್ಯ ನಿರೂಪಿಸಿ, ಹರೀಶ್ ನೂಜೇಲು ವಂದಿಸಿದರು. ಸಂಪಾಜೆ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟ ಶುಭಾರಂಭಗೊಂಡಿತು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…