ಜಿಲ್ಲೆ

ಸಂಪಾಜೆಯಲ್ಲಿ ದುಡಿಯೋಣ ಬಾ ಅಭಿಯಾನಕ್ಕೆ ಚಾಲನೆ

Share

ಸಂಪಾಜೆ ಗ್ರಾಮ ಪಂಚಾಯತ್‌ ನಲ್ಲಿ ‘ ದುಡಿಯೋಣ ಬಾ ‘ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ , ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬೇಸಿಗೆಯಲ್ಲಿ ‌ಕೆಲಸಕ್ಕಾಗಿ ಜನರು ವಲಸೆ ಹೋಗುವುದನ್ನು ತಪ್ಪಿಸಲು , ಆಯಾ ಊರಿನಲ್ಲಿ ಕೆಲಸ ಒದಗಿಸಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಲಾಗಿದ್ದು , ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಲಾಯಿತು.

ಸಂಪಾಜೆ ಗ್ರಾಮ ಪಂಚಾಯತ್‌ ನಲ್ಲಿ ಆಯೋಜಿಸಲಾಗಿದ್ದ ದುಡಿಯೋಣ ಬಾ ಕಾರ್ಯಕ್ರಮ ಉದ್ದೇಶಿಸಿ ಮಡಿಕೇರಿ ತಾಲ್ಲೂಕು ತಾಂತ್ರಿಕ ಸಂಯೋಜಕರು ಮಾತನಾಡಿದರು.‌ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಜಾಬ್ ಕಾರ್ಡ್ ಪಡೆದುಕೊಂಡು ಕೆಲಸಕ್ಕಾಗಿ ಬೇಡಿಕೆ ಅರ್ಜಿ ಸಲ್ಲಿಸಿ ಹಾಗು ವೈಯಕ್ತಿಕ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಿ , ಕೂಲಿ ಮೊತ್ತ 289 ರಿಂದ 309 ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ನಿರ್ಮಲ ಭರತ್  ,ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮಾರ್ಚ್ 15 ರಿಂದ ಜೂನ್ 30 ರವರೆಗೆ , ದುಡಿಯೋಣ ಬಾ ಅಭಿಯಾನದಲ್ಲಿ ಭಾಗವಹಿಸಿ ಅಕುಶಲ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರ ಕೆಲಸ ನೀಡುವುದು ,ಯೋಜನೆಯಿಂದ ಹೊರಗುಳಿದ ಕುಟುಂಬವನ್ನು ಗುರುತಿಸಿ ಉದ್ಯೋಗ ಚೀಟಿಯನ್ನು ವಿತರಿಸುವುದು.ಅಭಿಯಾನದ ಮುಖ್ಯ ಉದ್ದೇಶವಾಗಿದೆ.ಸಂಪಾಜೆ ಗ್ರಾಮದ ಜನರು ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ .ಇನ್ನಷ್ಟು ಯೋಜನೆಯ ಅವಕಾಶವನ್ನು ಪಡೆದುಕೊಳ್ಳಿ ಎಂದು ಕರೆ ನೀಡಿದರು.

ಈ ಸಂದರ್ಭ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ‌ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ ನವ ಭಾರತದ ನಾರಿ ‘ ಪ್ರಶಸ್ತಿಗೆ ಭಾಜನರಾದ ನರೇಗಾ ಫಲಾನುಭವಿ ಉದಯಕುಮಾರಿ ಸಂಪಾಜೆ ಯವರನ್ನು , ಗೌರವಿಸಲಾಯಿತು . ಹಾಗೂ ನರೇಗಾದಡಿ ನೂರು ದಿನ ಕೆಲಸ ಪೂರೈಸಿದ ಸೀತಮ್ಮ ಸುಂದರ , ಜಲಜಾ ಚಂದ್ರಶೇಖರ , ನಾರಾಯಣ ಕುಕ್ಕೇಟಿ ಅವರನ್ನು ಸನ್ಮಾನಿಸಲಾಯಿತು.

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಮಾಹಿತಿಯುಳ್ಳ ಕರಪತ್ರವನ್ನು ಹಂಚಿ ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ನಡೆದ ನರೇಗಾ ಕಾಮಗಾರಿ ಕುರಿತಾದ ವಿಡಿಯೋ ಡಾಕ್ಯುಮೆಂಟರಿಯನ್ನು , ಪ್ರದರ್ಶಿಸಲಾಯಿತು. ಹಾಗು ಜಾಬ್ ಕಾರ್ಡ್ ಅನ್ನು ಗ್ರಾ.ಪಂ ಅಧ್ಯಕ್ಷರು ,ಉಪಾಧ್ಯಕ್ಷರು , ಸದಸ್ಯರು ವಿತರಿಸಿದರು.

ನರೇಗಾ ಉದ್ಯಾನವನದಲ್ಲಿ ಸಸಿ ನೆಡುವಿಕೆ : ಪಂಚಾಯತ್ ಮುಂಭಾಗ ಹಾಗು ಬಿ.ಸಿ.ಎಂ ಹಾಸ್ಟೆಲ್ ಮುಂಭಾಗ ನಿರ್ಮಾಸುತ್ತಿರುವ ನರೇಗಾ ಉದ್ಯಾನವನದಲ್ಲಿ ಸಸಿಯನ್ನು ಜಾಬ್ ಕಾರ್ಡ್ ದಾರರು ನೆಟ್ಟರು.

ಪೌಷ್ಟಿಕ ತೋಟ ತರಕಾರಿ ಮಾರಾಟ : ನರೇಗಾದಲ್ಲಿ 1854 ರೂ ರಷ್ಟು ವೈಯಕ್ತಿಕ ಪೌಷ್ಟಿಕ ತೋಟ ನಿರ್ಮಿಸಲು ಅವಕಾಶವಿದ್ದು , ಪೌಷ್ಟಿಕ ತೋಟದಲ್ಲಿ ಬೆಳೆದ ಸೊಪ್ಪು , ತರಕಾರಿಯನ್ನು ಫಲಾನುಭವಿಗಳು ಮಾರಾಟಕ್ಕೆ ಇರಿಸಿದ್ದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಜನರು ತರಕಾರಿ ಖರೀದಿಯಲ್ಲಿ ತೊಡಗಿದ್ದರು.

ತಾಲೂಕು ಐ.ಇ.ಸಿ. ಸಂಯೋಕರಾದ ಅಕ್ಷಿತ ಕೆ.ಡಿ ನರೇಗಾ ಮಾಹಿತಿಯನ್ನು ಒದಗಿಸಿಕೊಟ್ಟರು .ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಸ್ವಾಗತಿಸಿ ನಿರೂಪಿಸಿದರು , ಕಾರ್ಯದರ್ಶಿ ಸೀತಾರಾಮ ವಂದಿಸಿದರು. ತಾಲೂಕು ಎಮ್.ಐ.ಎಸ್ ಸಂಯೋಜಕರು ಬಿನ್ಸಿ ಜಿ.ಯು , ಗ್ರಾ.ಪಂ ಉಪಾಧ್ಯಕ್ಷರು ಜಗದೀಶ್ , ಗ್ರಾ.ಪಂ ಸದಸ್ಯರು , ಪಂಚಾಯತ್ ಸಿಬ್ಬಂದಿ ವರ್ಗ , ಸ್ವಸಹಾಯ ಸಂಘದ ಸದಸ್ಯರು , ಗ್ರಾಮಸ್ಥರು ಹಾಜರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

4 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

5 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

6 hours ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

19 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

19 hours ago