ಸಂಪಾಜೆ ದರೋಡೆ ಪ್ರಕರಣ | 4 ಆರೋಪಿಗಳ ಬಂಧನ | ಮುಂದುವರಿದ ತನಿಖೆ |

March 30, 2022
11:52 PM

ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ  ಅಂಬರೀಶ್‌ ಭಟ್‌ ಎಂಬವರ ಮನೆಗೆ  ನುಗ್ಗಿದ ದರೋಡೆಕೋರರು  ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.8 ಲಕ್ಷ ರೂಪಾಯಿ ದರೋಡೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸಂಪಾಜೆಯಲ್ಲಿ  ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್‌ ಅವರ  ಮನೆಗೆ ಮಾ.20  ಭಾನುವಾರ ರಾತ್ರಿ ಸುಮಾರು 8.30  ರ ಹೊತ್ತಿಗೆ ನುಗ್ಗಿದ ದರೋಡೆಕೋರರು  ಅಂಬರೀಶ್‌ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದರು. ಈ ಸಮಯದಲ್ಲಿ ಅಂಬರೀಶ್‌ ಭಟ್‌ ಹಾಗೂ ಅವರ ಪುತ್ರ ಮನೆಯಲ್ಲಿ  ಇರಲಿಲ್ಲ.ಈ ಪ್ರಕರಣದ ಬಗ್ಗೆ ಅಂಬರೀಶ್‌ ಅವರ ಸೊಸೆ ಆಶಾ  ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 4 ಆರೋಪಿಗಳನ್ನು  ಬಂಧಿಸಿದ್ದಾರೆ.

ಪ್ರಕರಣದ ಪತ್ತೆ ಬಗ್ಗೆ ಪೊಲೀಸ್‌ ಅಧೀಕ್ಷಕರಾದ ಸೋನಾವಣೆ ಋಷಿಕೇಶ್‌ ಭಗವಾನ್‌ ಹಾಗೂ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರ್‌ ಚಂದ್ರ ನಿರ್ದೇಶನದಂತೆ ಪೊಲೀಸ್‌ ಉಪಾಧೀಕ್ಷಕ ಗಾನಾ ಪಿ ಕುಮಾರ್‌ ಅವರು ಸುಳ್ಯ ಪೊಲೀಸ್‌ ವೃತ್ತನಿರೀಕ್ಷಕ ನವೀನ್‌ ಚಂದ್ರ ಜೋಗಿ  ನೇತೃತ್ವದಲ್ಲಿ ವಿವಿಧ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ತಮಿಳುನಾಡು ಮೂಲದ ಕಾರ್ತಿಕ್‌(38) ಹಾಗೂ ನರಸಿಂಹನ್‌(40) , ಹಾಸನ ಮೂಲದ ಯದುಕುಮಾರ್‌(33)  ಹಾಗೂ  ದೀಕ್ಷಿತ್‌ (26) ಅವರನ್ನು ಬಂಧಿಸಿ  ನಗದು ಹಾಗೂ ಕೆಲವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಾಹನ ಹಾಗೂ ಮೊಬೈಲ್‌ ವಶ ಪಡೆದು ತನಿಖೆ ಮುಂದುವರಿದಿದೆ, ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಸುಳ್ಯ ಪೊಲೀಸ್‌ ನಿರೀಕ್ಷಕರಾದ ದಿಲೀಪ್‌ ಆರ್‌ , ರತ್ನಕುಮಾರ್‌, ಬಂಟ್ವಾಳ ಠಾಣಾ ಪಿಎಸ್‌ಐ ಹರೀಶ್‌ ಎಂ ಆರ್‌, ಬೆಳ್ಳಾರೆ ಠಾಣಾ ಎಎಸ್‌ಐ ಭಾಸ್ಕರ್‌,   ಪೊಲೀಸ್‌ ಇಲಾಖಾ ಸಿಬಂದಿಗಳಾದ ಜಯರಾಮ್‌, ಉದಯ್‌ ಗೌಡ  , ಅನಿಲ್‌, , ಮಹದೇವ ಪ್ರಸಾದ್‌ , ದೇವರಾಜ್‌, ವಿಜಯಕುಮಾರ್‌  ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror