ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.8 ಲಕ್ಷ ರೂಪಾಯಿ ದರೋಡೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಪಾಜೆಯಲ್ಲಿ ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್ ಅವರ ಮನೆಗೆ ಮಾ.20 ಭಾನುವಾರ ರಾತ್ರಿ ಸುಮಾರು 8.30 ರ ಹೊತ್ತಿಗೆ ನುಗ್ಗಿದ ದರೋಡೆಕೋರರು ಅಂಬರೀಶ್ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದರು. ಈ ಸಮಯದಲ್ಲಿ ಅಂಬರೀಶ್ ಭಟ್ ಹಾಗೂ ಅವರ ಪುತ್ರ ಮನೆಯಲ್ಲಿ ಇರಲಿಲ್ಲ.ಈ ಪ್ರಕರಣದ ಬಗ್ಗೆ ಅಂಬರೀಶ್ ಅವರ ಸೊಸೆ ಆಶಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣದ ಪತ್ತೆ ಬಗ್ಗೆ ಪೊಲೀಸ್ ಅಧೀಕ್ಷಕರಾದ ಸೋನಾವಣೆ ಋಷಿಕೇಶ್ ಭಗವಾನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ನಿರ್ದೇಶನದಂತೆ ಪೊಲೀಸ್ ಉಪಾಧೀಕ್ಷಕ ಗಾನಾ ಪಿ ಕುಮಾರ್ ಅವರು ಸುಳ್ಯ ಪೊಲೀಸ್ ವೃತ್ತನಿರೀಕ್ಷಕ ನವೀನ್ ಚಂದ್ರ ಜೋಗಿ ನೇತೃತ್ವದಲ್ಲಿ ವಿವಿಧ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ತಮಿಳುನಾಡು ಮೂಲದ ಕಾರ್ತಿಕ್(38) ಹಾಗೂ ನರಸಿಂಹನ್(40) , ಹಾಸನ ಮೂಲದ ಯದುಕುಮಾರ್(33) ಹಾಗೂ ದೀಕ್ಷಿತ್ (26) ಅವರನ್ನು ಬಂಧಿಸಿ ನಗದು ಹಾಗೂ ಕೆಲವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಾಹನ ಹಾಗೂ ಮೊಬೈಲ್ ವಶ ಪಡೆದು ತನಿಖೆ ಮುಂದುವರಿದಿದೆ, ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ಸುಳ್ಯ ಪೊಲೀಸ್ ನಿರೀಕ್ಷಕರಾದ ದಿಲೀಪ್ ಆರ್ , ರತ್ನಕುಮಾರ್, ಬಂಟ್ವಾಳ ಠಾಣಾ ಪಿಎಸ್‌ಐ ಹರೀಶ್ ಎಂ ಆರ್, ಬೆಳ್ಳಾರೆ ಠಾಣಾ ಎಎಸ್‌ಐ ಭಾಸ್ಕರ್, ಪೊಲೀಸ್ ಇಲಾಖಾ ಸಿಬಂದಿಗಳಾದ ಜಯರಾಮ್, ಉದಯ್ ಗೌಡ , ಅನಿಲ್, , ಮಹದೇವ ಪ್ರಸಾದ್ , ದೇವರಾಜ್, ವಿಜಯಕುಮಾರ್ ಭಾಗವಹಿಸಿದ್ದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490