ಶಿರಾಡಿ – ಚಾರ್ಮಾಡಿಯಲ್ಲಿ ಹಗಲು ಸಂಚಾರಕ್ಕೆ ಅನುಮತಿ | ಸಂಪಾಜೆ ಘಾಟಿಯಲ್ಲೂ ಬಿರುಕು |

July 23, 2021
11:23 PM

ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ  ಭಾರೀ ಮಳೆಯ ಕಾರಣದಿಂದ ಘಾಟಿ ಪ್ರದೇಶಗಳಲ್ಲಿ ಭೂಕುಸಿತಗಳು ಹೆಚ್ಚಾಗಿದೆ. ಈಗಾಗಲೇ ಶಿರಾಡಿ ಘಾಟಿ , ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ವಾಹನ ಸಂಚಾರಕ್ಕೆ ತೊಡಕಾಗಿದೆ. ಇದೀಗ ಸಂಪಾಜೆ-ಮಡಿಕೇರಿ ಹೆದ್ದಾರಿಯ ಕಾಟಕೇರಿ, ಎರಡನೇ ಮೊಣ್ಣಂಗೇರಿ, ಕರ್ತೋಜಿ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಭಾರೀ ವಾಹನಗಳ ಓಡಾಟ ಸರಾಗವಾಗಿ ನಡೆದರೆ ಇಲ್ಲೂ ರಸ್ತೆ ಕುಸಿತವಾಗುವ ಸಾಧ್ಯತೆ ಇದೆ.  

Advertisement
ಮಡಿಕೇರಿ-ಸಂಪಾಜೆ ರಸ್ತೆ

ಶಿರಾಡಿ ಘಾಟ್‌ ಪ್ರದೇಶದ ದೋಣಿಗಲ್‌ ಬಳಿ ರಸ್ತೆ ಕುಸಿದು ವಾಹನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದು ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರವೇ  ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪ್, ದ್ವಿಚಕ್ರ ವಾಹನಗಳು, ಮಿನಿ ಟೆಂಪೋ, ಸಾರಿಗೆ ಬಸ್ ಗಳಿಗೆ ಮಾತ್ರವೇ ಸದ್ಯ ಅವಕಾಶ ನೀಡಲಾಗಿದೆ.

ಭಾರೀ ಮಳೆಯ ಕಾರಣದಿಂದ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ  ರಸ್ತೆ ಕುಸಿತಗೊಂಡು ವಾಹನ ಸಂಚಾರಕ್ಕೆ ತೊಡಕಾಗಿತ್ತು. ಇಲ್ಲಿ ಕೂಡಾ ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರವೇ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಲಘು ವಾಹನ ಮಾತ್ರವೇ ಸದ್ಯ ಓಡಾಟ ನಡೆಸಲು ಸಾಧ್ಯವಿದೆ.

ಸದ್ಯ ಎರಡೂ ಘಾಟಿ ಪ್ರದೇಶದಲ್ಲಿ  ಘನ ವಾಹನ ಓಡಾಟಕ್ಕೆ ನಿರ್ಬಂಧವಿದೆ. ಟ್ಯಾಂಕರ್, ರಾಜಹಂಸ, ಐರಾವತ ಕಂಟೇನರ್ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಸಂಪಾಜೆ- ಮಡಿಕೇರಿ ರಸ್ತೆಯ ದೃಶ್ಯ

ಈ ನಡುವೆ ಕೊಡಗು ಪ್ರದೇಶದಲ್ಲಿ ಭಾರೀ ಮಳೆಯ ಕಾರಣದಿಂದ ಸಂಪಾಜೆ-ಮಡಿಕೇರಿ ರಸ್ತೆಯ ಕಾಟಕೇರಿ ಬಳಿ ಹಾಗೂ ಮದೆನಾಡು ಬಳಿಯ ಕರ್ತೋಜಿಯಲ್ಲಿ ಮತ್ತು ಎರಡನೇ ಮೊಣ್ಣಂಗೇರಿಯಲ್ಲಿ ಮುಖ್ಯ ರಸ್ತೆ  ಬಿರುಕು ಬಿಟ್ಟಿದೆ. ಶುಕ್ರವಾರ ಶಾಸಕ ಕೆ ಜಿ ಬೋಪಯ್ಯ ಅವರು ಸ್ಥಳ ಪರಿಶೀಲನೆ ನಡೆಸಿದರು. ಸದ್ಯ ಶಿರಾಡಿ ಹಾಗೂ ಚಾರ್ಮಾಡಿ ಘಾಟ್‌ ಪ್ರದೇಶದಲ್ಲಿ ಘನ ವಾಹನ ಓಡಾಟಕ್ಕೆ ನಿರ್ಬಂಧ ಇರುವುದರಿಂದ ಎಲ್ಲಾ ಘನ ವಾಹನಗಳು ಸಂಪಾಜೆ ಮೂಲಕವೇ ಬೆಂಗಳೂರು-ಮಂಗಳೂರು ಕಡೆಗೆ ಓಡಾಟ ನಡೆಸುವುದರಿಂದ ರಸ್ತೆಯಲ್ಲಿ ಇನ್ನಷ್ಟು ಬಿರುಕು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಂಪಾಜೆ-ಮಡಿಕೇರಿ ರಸ್ತೆ ಮೂಲಕ ಭಾರೀ ವಾಹನ ಸಂಚಾರವನ್ನು ಸದ್ಯ ನಿಷೇಧಿಸುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ಶಾಸಕ ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.

 

 

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ
April 23, 2025
3:13 PM
by: ಸಾಯಿಶೇಖರ್ ಕರಿಕಳ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group