ಸಂಪೂರ್ಣ ಡಿಜಿಟಲೀಕರಣದಂತ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ,ಸದಸ್ಯರಿಗೆ ಗುಣಮಟ್ಟದ ಸೇವೆ ,ಸಾಮಾಜಿಕ ಸ್ಪಂದನೆಯಲ್ಲಿ ಸಂಪಾಜೆ ಸೊಸೈಟಿ ಮುಂಚೂಣಿಯಲ್ಲಿದ್ದು ,ಇದು ನಮ್ಮ ಜಿಲ್ಲೆಗೆ ಮಾದರಿ ಸಂಸ್ಥೆಯಾಗಿದೆ ಎಂದು ಮಾಜಿ ವಿಧಾನಸಭಾದ್ಯಕ್ಷ ,ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.
ಅವರು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೂ 1.76 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಗೋದಾಮು ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಸಂಸ್ಥೆಯ ಅದ್ಯಕ್ಷ ಅನಂತ್ ಊರುಬೈಲು ಪ್ರಾಸ್ತಾವಿಕವಾಗಿ ಮಾತನಾಡಿ ,ಸಂಸ್ಥೆಯ ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ನೆಲಮಹಡಿಯಲ್ಲಿ 5 ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸುತ್ತಿದ್ದು ,ಮೇಲಿನ ಮಹಡಿಗಳಲ್ಲಿ ಸುಸಜ್ಜಿತ ಕಚೇರಿಯನ್ನು ನಿರ್ಮಿಸುವ ಉದ್ದೇಶವಿದ್ದು ,ಈ ಯೋಜನೆಗೆ ನಬಾರ್ಡ್ ನಿಂದ ಹಣಕಾಸು ನೆರವು ಪಡೆಯುತ್ತಿರುವುದಾಗಿ ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ರಾಜಾರಾಂ ಕಳಗಿ ,ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಬ್ರಹ್ಮಣ್ಯ ಉಪಾಧ್ಯಾಯ, ಸಂಸ್ಥೆಯ ಮಾಜಿ ಅದ್ಯಕ್ಷರುಗಳಾದ ಬಲ್ಯಮನೆ ಗಣಪತಿ , ಆದಂಕುಂಞ ,ನಿರ್ದೇಶಕರು ,ಸಂಪಾಜೆ ಮತ್ತು ಚೆಂಬು ಗ್ರಾಮದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ,ಸಿಬ್ಬಂದಿ ವರ್ಗದವರು ,ಸದಸ್ಯರು ಉಪಸ್ಥಿತರಿದ್ದರು. ಪುರೋಹಿತರಾದ ಅಂಬರೀಶ್ ಭಟ್ ವೈದಿಕ ಕಾರ್ಯ ನೆರವೇರಿಸಿದರು.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…