ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಅಂಬರೀಶ್ ಭಟ್ ಎಂಬವರ ಮನೆಗೆ ಭಾನುವಾರ ರಾತ್ರಿ ಮನೆಗೆ ನುಗ್ಗಿದ ದರೋಡೆಕೋರರು ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು 1.5 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ವರದಿಯಾಗಿದೆ. ಸಂಪಾಜೆಯಲ್ಲಿ ಪೌರೋಹಿತ್ಯ ಹಾಗೂ ಜ್ಯೋತಿಷ್ಯ ಹೇಳುತ್ತಿದ್ದ ಅಂಬರೀಶ್ ಅವರ ಮನೆಗೆ ಭಾನುವಾರ ರಾತ್ರಿ ಸುಮಾರು 8.30 ರ ಹೊತ್ತಿಗೆ ನುಗ್ಗಿದ ದರೋಡೆಕೋರರು ಅಂಬರೀಶ್ ಅವರ ಸೊಸೆ ಹಾಗೂ ಪತ್ನಿಯನ್ನು ಬೆದರಿಸಿ ದರೋಡೆ ಮಾಡಿದ್ದಾರೆ, ಈ ಸಮಯದಲ್ಲಿ ಅಂಬರೀಶ್ ಭಟ್ ಹಾಗೂ ಅವರ ಪುತ್ರ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

