ಕೊಡಗು ಸಂಪಾಜೆ ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಹಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕಾರ್ಯಕ್ರಮ ಏರ್ಪಡಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯೊಂದಿಗೆ ಸಮಾರಂಭವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರ್ಮಲ ಭರತ್ ಉದ್ಘಾಟನೆಯನ್ನು ಮಾಡಿದರು. ಮುಖ್ಯ ಅತಿಥಿಗಳಾಗಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶೀಲಾ ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಇರ್ಷಾದ್, ಬಾಲ ಕಾರ್ಮಿಕ ಅಧಿಕಾರಿ ಶಿರಾಜ್ ಅಹಮ್ಮದ್, ಸ್ತ್ರೀ ಶಕ್ತಿ ತಾಲೋಕು ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ, ತಾಲೂಕು ಸದಸ್ಯೆ ರೂಪಾ ರಮೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ ಮತ್ತು ಕುಮಾರ್ ಚೆದ್ಕಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಅರಣ್ಯ ಶಾಸ್ತ್ರ ಎಂ ಎಸ್ಸಿ ಯಲ್ಲಿ ವಿಶ್ವವಿದ್ಯಾನಿಲಯದ ಚಿನ್ನದ ಪದಕವನ್ನು ರಾಜ್ಯಪಾಲರಿಂದ ಪಡೆದಿರುವ ಸಂಪಾಜೆ ಗ್ರಾಮದ ಮಂಗಳಪಾರೆ ಶೋಭಾನಾರಾಯಣ ರವರ ಪುತ್ರ ಅಶ್ವಥ್ ಎಂ ಎನ್ ಇವರಿಗೆ ಸನ್ಮಾನಿಸಲಾಯಿತು.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…