ಕರ್ನಾಟಕ ಉಪ ಖನಿಜ ಯಾಯಿತಿ ನಿಯಮಗಳು 1994 ರ ತಿದ್ದುಪಡಿ ನಿಯಮಗಳು 2021 ಹಾಗೂ ಹೊಸ ಮರಳು ನೀತಿ-2020 ಅನ್ವಯ ಜಿಲ್ಲೆಯ ಮಂಗಳೂರು ತಾಲ್ಲೂಕು ಫಲ್ಗುಣಿ ನದಿ ಪಾತ್ರದ ಅದ್ಯಪಾಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲ್ಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೋರೇಷನ್ ಲಿಮಿಟೆಡ್ ಇವರಿಗೆ ಅಧಿಸೂಚನೆ ಹೊರಡಿಸಿ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿ ಮರಳು ತೆಗೆಯಲು ಕಾರ್ಯಾದೇಶ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಸದರಿ ಡ್ಯಾಂಗಳಲ್ಲಿ ಹೂಳಿನೊಂದಿಗೆ ದೊರಕುವ ಮರಳನ್ನು ತೆಗೆದು ಸ್ಟಾಕ್‍ಯಾರ್ಡ್‍ನಲ್ಲಿ ಶೇಖರಣೆ ಮಾಡುತ್ತಿದ್ದು, ಅದ್ಯಪಾಡಿ ಮರಳು ದಾಸ್ತಾನು ಪ್ರದೇಶದಲ್ಲಿ ಸುಮಾರು 15,000 ಮೆ.ಟನ್ ಮತ್ತು ಶಂಭೂರು ಮರಳು ದಾಸ್ತಾನು ಪ್ರದೇಶದಲ್ಲಿ ಅಂದಾಜು 700 ಮಟನ್ ಮರಳು ಲಭ್ಯವಿರುತ್ತದೆ.
ಈ ಮರಳನ್ನು ಸಾರ್ವಜನಿಕರಿಗೆ ಗ್ರಾಹಕರಿಗೆ ಕಾಮಗಾರಿಗಳಿಗೆ ಕೆ.ಎಸ್.ಎಂ.ಸಿ.ಎಲ್. ವತಿಯಿಂದ ಖನಿಜ ಸಾಗಾಣಿಕೆ ಪರವಾನಿಗೆಯೊಂದಿಗೆ ವಿತರಿಸಲಾಗುವುದು.
ಸಾರ್ವಜನಿಕರು ಕಾಮಗಾರಿಗಳ ಗುತ್ತಿಗೆದಾರರು ಮರಳು ಮಿತ್ರ ಆ್ಯಪ್ ಮುಖಾಂತರ ಅಥವಾ ಸಹಾಯವಾಣಿ ಸಂಖ್ಯೆ 080-28055000 ಮೂಲಕ ಪ್ರತಿ ಮೆಟ್ರಿಕ್ ಟನ್ ಮರಳಿಗೆ 700 ರೂ.ಗಳ ಜಿ.ಎಸ್.ಟಿ ಮೊತ್ತವನ್ನು ಪಾವತಿಸಿ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಮರಳು ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲಲಿ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…