ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ, ಈ ಬಾರಿ ಮಳೆಯ ಕಾರಣದಿಂದ ರಸ್ತೆ ಹಾಳಾಗಿರುವುದು ನಿಜ. ದ ಕ ಜಿಲ್ಲೆಯಲ್ಲಿ ರಸ್ತೆ ಹಾನಿಯಾಗಿದೆ, ಎಷ್ಟು ಸಾಧ್ಯವೋ ಅಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅನೇಕ ಕಡೆ ಕಾಮಗಾರಿ ಶುರುವಾಗಿದೆ. ಇನ್ನೂ ಹೆಚ್ಚು ಹಣ ಬಿಡುಗಡೆಗೆ ಸೀಎಂ ಜೊತೆ ಮಾತುಕತೆ ನಡೆಸಲಾಗುತ್ತದೆ. ಈ ವರ್ಷ ಬಾಬ್ತು ಇನ್ನೂ ಅನುದಾನ ಬಿಡುಗಡೆ ಆಗಿಲ್ಲ. ಆದಷ್ಟು ಬೇಗನೆ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ ಸಂಜೀವ ಮಟಂದೂರು ಅವರು ತಾಲೂಕು ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…