City mirror

ಸಲಹೆ, ಸೂಚನೆ ಹಾಗೂ ಚಿಕಿತ್ಸೆಗೆ ಇ-ಸಂಜೀವಿನಿ ಆ್ಯಪ್ ಬಳಸಿ ಜಿಲ್ಲಾ ಉಸ್ತುವಾರಿ ಸಚಿವ – ಕೋಟಾ ಶ್ರೀನಿವಾಸ ಪೂಜಾರಿ

Share
ಸಾಮಾನ್ಯ ಕೆಮ್ಮು, ನೆಗಡಿ, ಜ್ವರ ಅಲ್ಲದೇ ಇತರ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲಿಯೇ ಕುಳಿತು ಸಾರ್ವಜನಿಕರು ವೈದ್ಯರಿಂದ ಸಲಹೆ ಪಡೆಯಲು ಸರ್ಕಾರ ಇ-ಸಂಜೀವಿನಿ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.
Advertisement

ಮಂಗಳೂರು ಜಿಲ್ಲೆಯಲ್ಲಿ 24 ತಜ್ಞ ವೈದ್ಯರು ಈಗಾಗಲೇ ಆ್ಯಪ್ ನಲ್ಲಿ ಸೇವೆ ನೀಡುತ್ತಿದ್ದಾರೆ. ಹೊರೆ ಜಿಲ್ಲೆಯ 100 ಕ್ಕೂ ಅಧಿಕ ರೋಗಿಗಳಿಗೆ ವಿಡೀಯೊ ಮೂಲಕ ಸಂಪರ್ಕಿಸಿ ಚಿಕಿತ್ಸೆ ನೀಡಲಾಗಿದೆ. ಈ ಆ್ಯಪ್‍ನಲ್ಲಿ ಕರ್ನಾಟಕದಲ್ಲಿ ಇರುವ ಉತ್ತಮ ವೈದ್ಯ ತಂಡವು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಯಾವುದೇ ಜಿಲ್ಲೆಯಲ್ಲಿ ಇವರು ವೈದ್ಯರನ್ನು ರೋಗಿ ಸಂಪರ್ಕಿಸಬಹುದಾಗಿದೆ. ವೈದ್ಯರನ್ನು ಸಂಪರ್ಕಿಸಲು ಮೊಬೈಲ್‍ನ ಪ್ಲೇ ಸ್ಟೋರ್ನಲ್ಲಿ ಇ-ಸಂಜೀವಿನಿ ಒ.ಪಿ.ಡಿ. ಎಂಬ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು ಅಥವಾ ಗೂಗಲ್ ನಲ್ಲಿ ಇ-ಸಂಜೀವಿನಿ ಒ.ಪಿ.ಡಿ. ಎಂದು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ವೆಬ್ ವಿಡಿಯೊ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಆರೋಗ್ಯ ಸಮಸ್ಯೆ ಕುರಿತು ವಿವರಿಸಿದರೆ ಚಿಕಿತ್ಸೆ ಬರೆದು ಕೊಡಲಿದ್ದಾರೆ. ಕೋವಿಡೇತರ ಆರೋಗ್ಯದ ತೊಂದರೆಗಳಿಗೆ ಮನೆಯಲ್ಲಿ ಕುಳಿತು ಚಿಕಿತ್ಸೆ ಪಡೆಯಲು ಸಹಕಾರಿಯಾಗಲ್ಲಿದೆ.

ಆ್ಯಪ್‍ನಲ್ಲಿ ರೋಗಿಯ ರಿಜಿಸ್ಟ್ರೇಷನ್ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸಿದರೆ ಒಟಿಪಿ ಸಂಖ್ಯೆ ಬರಲಿದೆ. ಈ ಒಟಿಪಿ ನಮೂದಿಸಿದರೆ, ರಿಜಿಸ್ಟ್ರೇಷನ್ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ. ಅದರಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ಸಂಖ್ಯೆ ಹಾಗೂ ವಿಳಾಸ ನಮೂದಿಸಿ ಲಾಗಿನ್ ಆಗಬೇಕು. ಈ ವೇಳೆ ಟೋಕನ್ ನಂಬರ್ ದೊರೆಯಲಿದೆ. ಟೋಕನ್ ನಂಬರ್ ನೀಡಿ, ವೈದ್ಯರನ್ನು ವಿಡಿಯೊ ಕಾಲ್ ಮೂಲಕ ಸಂಪರ್ಕಿಸಬಹುದು. ಈ ಸೇವೆ ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಲಭ್ಯವಿರುತ್ತದೆ. ಒಮ್ಮೆ ನೋಂದಣಿಯಾದರೆ ಮತ್ತೊಮ್ಮೆ ಮಾಡಿಕೊಳ್ಳುವ ಅಗತ್ಯವಿರುವುದಿಲ್ಲ.

ಸಾರ್ವಜನಿಕರು ಆರೋಗ್ಯ ದೃಷ್ಠಿಯಿಂದ ಸರ್ಕಾರ ಉತ್ತಮ ಚಿಕಿತ್ಸೆಯನ್ನು ಬೆರಳ ತುದಿಯಲ್ಲಿಯೇ ಸುಲಭವಾಗಿ ಪಡೆಯಬೇಕು ಎಂಬ ಉದ್ದೇಶದಿಂದ ಇ-ಸಂಜೀವಿನಿ ಆ್ಯಪ್ ಮೂಲಕ ಅನ್‍ಲೈನ್‍ನಲ್ಲಿ ಚಿಕಿತ್ಸೆ ನೀಡಲು ಮುಂದಾಗಿದೆ. ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡು ಹಂತಗಳಲ್ಲಿ ಹಾಲಿನ ದರ ಏರಿಕೆ | ಒಟ್ಟು ರೂ.7 ಹೆಚ್ಚಳ | ನೇರ ನಗದು ಮೂಲಕ ರೈತರಿಗೆ ಪಾವತಿ

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ  ಹಾಲಿನ ದರ ಒಟ್ಟು…

6 hours ago

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…

7 hours ago

ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ

ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…

8 hours ago

ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ

ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…

8 hours ago

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…

8 hours ago

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…

14 hours ago