Advertisement
MIRROR FOCUS

ಉಪ್ಪುಂದದಲ್ಲಿ ಸಂಜೀವಿನಿ ಸಂತೆ : ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ

Share

ಉಡುಪಿ ಜಿಲ್ಲೆಯ ಉಪ್ಪುಂದ ಗ್ರಾಮದಲ್ಲಿ ಸಂಜೀವಿನಿ ಸಂತೆ ನಡೆಯಿತು. ಗ್ರಾಮೀಣ ಭಾಗದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು.

ಸಂತೆಯಲ್ಲಿ ಗ್ರಾಮೀಣ ಮಹಿಳೆಯರು ತಯಾರಿಸಿದ ಮೀನಿನ ಉತ್ಪನ್ನಗಳು, ಸಾಂಬಾರ ಪುಡಿ, ಕಷಾಯ ಪುಡಿ, ಹಪ್ಪಳ, ರೊಟ್ಟಿ, ಚಪಾತಿ, ಎಣ್ಣೆ, ಮಣ್ಣಿನ ದೀಪಗಳು, ಮನೆಯಲ್ಲಿ ತಯಾರಿಸಿದ ಸಿದ್ಧ ಉಡುಪುಗಳು ಸೇರಿದಂತೆ ವಿವಿಧ ಮನೆಬಳಕೆ ವಸ್ತುಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇಸೀಯ ಮತ್ತು ಶುದ್ಧ ಉತ್ಪನ್ನಗಳಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ಲಭಿಸಿತು.

ಇದೇ ವೇಳೆ ಮಹಿಳೆಯರು ಹಾಗೂ ಯುವಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು. ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಗ್ರಾಹಕ ಚಂದ್ರಪೂಜಾರಿ ಮಾತನಾಡಿ, “ಇಲ್ಲಿನ ವಸ್ತುಗಳು ಶುದ್ಧ ಹಾಗೂ ದೇಸೀಯವಾಗಿರುವುದರಿಂದ ರುಚಿಕರವಾಗಿವೆ. ಗ್ರಾಮೀಣ ಮಹಿಳೆಯರ ಸ್ವಾವಲಂಬಿ ಬದುಕಿಗೆ ಇಂತಹ ಸಂತೆಯು ಅತ್ಯಂತ ಸಹಕಾರಿಯಾಗಿದೆ” ಎಂದರು.

ಸಂಜೀವಿನಿ ಸಂಘದ ರೇಖಾ , ಈ ಸಂತೆಯಿಂದ ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕಿದ್ದು, ಉತ್ತಮ ವ್ಯಾಪಾರ ಹಾಗೂ ಆದಾಯ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇಂತಹ ಸಂತೆಯು ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ  ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

18 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

18 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago