ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರು ಸ್ವತಃ ತಾವೇ ಮಾಡಿರುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮಾರಾಟ ಮೇಳ ಮಂಗಳೂರು, ತಾಲ್ಲೂಕು ಪಂಚಾಯತ್ ಆವರಣದಲ್ಲಿ ನಡೆಯಿತು. ಈ ಸಂದರ್ಭ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್(ನಿಶಾ) ಇವರಿಗೆ ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿಯನ್ನು ಈ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.
ಕೆ.ಇ ಜಯರಾಮ್ ಜಿಲ್ಲಾ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಹಾಯಕ ಆಯುಕ್ತರು ಹರ್ಷವರ್ಧನ್ ಎಸ್. ಜೆ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟಿಸಿದರು. ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ , ಸಾನಿಧ್ಯ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಕವಿತಾ , ಜಿಲ್ಲಾ ವ್ಯವಸ್ಥಾಪಕರಾದ ಹರಿಪ್ರಸಾದ್ ಗೌಡ, NULM ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ಐರಿನ್ ರೆಬೆಲ್ಲೋ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ , ತಾಲ್ಲೂಕು ಪಂಚಾಯತ್ ಸಂಜೀವಿನಿ ಅಧಿಕಾರಿಗಳು , ಗ್ರಾಮ ಮಟ್ಟದ ಸಿಬ್ಬಂದಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…