ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಇದೇ ವೇಳೆ ಗೋಪೂಜೆ ಹಾಗೂ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂಭ್ರಮದ ಭಾಗವಾಗಿ ವಿವಿಧ ಧಾನ್ಯಗಳು ಕೃಷಿ ಸಲಕರಣೆಗಳ ಪ್ರದರ್ಶನ, ಕಬ್ಬಡಿ, ಕುಸ್ತಿ ಪಂದ್ಯಾವಳಿಗಳು ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ, ಕಡಲೇಕಾಯಿ, ಅವರೆಕಾಯಿ, ಬೆಲ್ಲದ ಪರಿಷೆ ಹಾಗೂ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಂಕ್ರಾತಿ ಹಬ್ಬ ಕೃಷಿಗೆ ಸಂಬಂಧಿಸಿದ ಹಬ್ಬವಾಗಿದೆ. ಇದರ ಆಚರಣೆಯ ಭಾಗವಾಗಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel