ಸುಳ್ಯ ವಿದ್ಯಾಮಾತಾ ಅಕಾಡೆಮಿಗೆ ಸಂತೋಷ್ ಹೆಗ್ಡೆ ಭೇಟಿ | ಪದವಿ ಪಡೆದ ಬಳಿಕ ಉನ್ನತ ಶಿಕ್ಷಣ, ತಾಂತ್ರಿಕ ಶಿಕ್ಷಣ ಪಡೆಯುವ ಅಗತ್ಯ ಇದೆ |

November 9, 2023
10:57 AM
ಭ್ರಷ್ಟಾಚಾರ ನಿರ್ಮೂಲನೆಗೆ ವಿದ್ಯಾರ್ಥಿಗಳು ಮಹತ್ವದ ಪಾತ್ರ ವಹಿಸಬೇಕು ಎಂದು ನ್ಯಾ.ಸಂತೋಷ್‌ ಹೆಗ್ಡೆ ಹೇಳಿದರು.

ಸಮಾಜದಲ್ಲಿ ಭಾವನೆಗಳನ್ನು ಬದಲಾಯಿಸುವ ಕೆಲಸ ಇಂದು ನಡೆಸಬೇಕಿದೆ. ಆಗ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೆಚ್ಚು ಮುಂದುವರಿಯಬೇಕು, ಪದವಿ ಬಳಿಕ ತಾಂತ್ರಿಕ ಶಿಕ್ಷಣದ ಕಡೆಗೂ ಗಮನ ನೀಡಬೇಕು ಎಂದು  ನಿವೃತ್ತ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಹೇಳಿದರು.

Advertisement
Advertisement

ಅವರು  ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ನೆರವೇರಿಸಿ  ಮಾತನಾಡಿದರು. ಪ್ರತಿಯೊಬ್ಬರು ಇರುವುದರಲ್ಲಿ ತೃಪ್ತಿ ಹೊಂದುವ ಗುಣ ಅಳವಡಿಸಿಕೊಂಡರೆ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಸಾಧ್ಯ ,ಇನ್ನೊಬ್ಬರ ಜೇಬಿಗೆ ಕೈಹಾಕದೇ, ಹಣಕ್ಕೆ ಆಸೆ ಪಡದೆ ಬದುಕಿದರೆ ಶ್ರೀಮಂತಿಕೆ ಇಲ್ಲದೆಯೂ ಸಂತೋಷದಿಂದ ಬದುಕಲು ಸಾಧ್ಯವಿದೆ ಎಂದರು. ಭ್ರಷ್ಟಾಚಾರ ಇದೇ ರೀತಿ ಮುಂದುವರಿದರೆ ಜನರಲ್ಲಿ ನಿರಾಶೆ, ಆಕ್ರೋಶ ಹೆಚ್ಚಾಗವಹುದು, ಇದಕ್ಕಾಗಿ ಈಗಲೇ ಎಲ್ಲರೂ ಎಚ್ಚೆತ್ತುಗೊಳ್ಳಬೇಕು ಎಂದು ಸಂತೋಷ್‌ ಹೆಗ್ಡೆ ಹೇಳಿದರು.

Advertisement

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಇಂದು ಸ್ಕೋಪ್ ಇರುವುದು ಯಾವುದೇ ಕೋರ್ಸ್‌ಗಳಿಗೆ ಅಲ್ಲಾ, ಸ್ಕೋಪ್ ಇರುವುದು ವ್ಯಕ್ತಿಗಳಿಗೆ, ಉತ್ತಮ ವ್ಯಕ್ತಿತ್ವ, ಪರಿಸ್ಥಿತಿಯನ್ನು ನಿಭಾಯಿಸುವ ಚಾಕಚಕ್ಯತೆ ಇದ್ದರೆ ಪ್ರತಿ ವ್ಯಕ್ತಿಯೂ ಶೋಭಿಸಲು ಸಾಧ್ಯ ಎಂದರು.

Advertisement

ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್ , ಸುಳ್ಯ ಟಿಎಪಿಸಿಎಂಎಸ್‌ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗೇಶ್ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ವಂದಿಸಿದರು.

Advertisement

ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಸಂತೋಷ್ ಹೆಗ್ಡೆಯವರು ಸಂವಾದ ನಡೆಸಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror