ಸಮಾಜದಲ್ಲಿ ಭಾವನೆಗಳನ್ನು ಬದಲಾಯಿಸುವ ಕೆಲಸ ಇಂದು ನಡೆಸಬೇಕಿದೆ. ಆಗ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿದೆ. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಹೆಚ್ಚು ಮುಂದುವರಿಯಬೇಕು, ಪದವಿ ಬಳಿಕ ತಾಂತ್ರಿಕ ಶಿಕ್ಷಣದ ಕಡೆಗೂ ಗಮನ ನೀಡಬೇಕು ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಹೇಳಿದರು.
ಅವರು ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪ್ರತಿಯೊಬ್ಬರು ಇರುವುದರಲ್ಲಿ ತೃಪ್ತಿ ಹೊಂದುವ ಗುಣ ಅಳವಡಿಸಿಕೊಂಡರೆ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಸಾಧ್ಯ ,ಇನ್ನೊಬ್ಬರ ಜೇಬಿಗೆ ಕೈಹಾಕದೇ, ಹಣಕ್ಕೆ ಆಸೆ ಪಡದೆ ಬದುಕಿದರೆ ಶ್ರೀಮಂತಿಕೆ ಇಲ್ಲದೆಯೂ ಸಂತೋಷದಿಂದ ಬದುಕಲು ಸಾಧ್ಯವಿದೆ ಎಂದರು. ಭ್ರಷ್ಟಾಚಾರ ಇದೇ ರೀತಿ ಮುಂದುವರಿದರೆ ಜನರಲ್ಲಿ ನಿರಾಶೆ, ಆಕ್ರೋಶ ಹೆಚ್ಚಾಗವಹುದು, ಇದಕ್ಕಾಗಿ ಈಗಲೇ ಎಲ್ಲರೂ ಎಚ್ಚೆತ್ತುಗೊಳ್ಳಬೇಕು ಎಂದು ಸಂತೋಷ್ ಹೆಗ್ಡೆ ಹೇಳಿದರು.
ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮೇಜರ್ ಡಾ.ಕುಶ್ವಂತ್ ಕೋಳಿಬೈಲು ಇಂದು ಸ್ಕೋಪ್ ಇರುವುದು ಯಾವುದೇ ಕೋರ್ಸ್‌ಗಳಿಗೆ ಅಲ್ಲಾ, ಸ್ಕೋಪ್ ಇರುವುದು ವ್ಯಕ್ತಿಗಳಿಗೆ, ಉತ್ತಮ ವ್ಯಕ್ತಿತ್ವ, ಪರಿಸ್ಥಿತಿಯನ್ನು ನಿಭಾಯಿಸುವ ಚಾಕಚಕ್ಯತೆ ಇದ್ದರೆ ಪ್ರತಿ ವ್ಯಕ್ತಿಯೂ ಶೋಭಿಸಲು ಸಾಧ್ಯ ಎಂದರು.
ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್ , ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಯಾಗಿದ್ದರು.
ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗೇಶ್ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಾವತಿ ಬಡ್ಡಡ್ಕ ವಂದಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳೊಂದಿಗೆ ಸಂತೋಷ್ ಹೆಗ್ಡೆಯವರು ಸಂವಾದ ನಡೆಸಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…