ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್ (30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು.
ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ನಟಿಯ ಡೈರಿ ಪೊಲೀಸರಿಗೆ ಲಭ್ಯವಾಗಿದ್ದು ತನಿಖೆ ಮಾಡಿದ ನಂತರವೇ ಆತ್ಮಗತ್ಯೆಗೆ ಕಾರಣದ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಮಾಜಿ ಗೆಳೆಯನ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel