ಎಲಿಮಲೆಯಲ್ಲಿ ಆಯುರ್ವೇದ ಚಿಕಿತ್ಸಾಲಯ ಸತ್ವಂ ಶುಭಾರಂಭ |

January 11, 2023
10:47 PM

ಸುಳ್ಯ ತಾಲೂಕಿನ ಎಲಿಮಲೆಯ ಹೊನ್ನಡಿ ಕಾಂಪ್ಲೆಕ್ಸ್‌ನಲ್ಲಿ ಡಾ.ಮಹೇಶ್‌ ಕೆ ಎಸ್‌ ಅವರ ಆಯುರ್ವೇದ ಕ್ಲಿನಿಕ್ ಸತ್ವಂ ಚಿಕಿತ್ಸಾಲಯ ಬುಧವಾರ ಆರಂಭಗೊಂಡಿತು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್‌ ದೀಪ ಬೆಳಗಿಸಿ ಉದ್ಘಾಟಿಸಿದರು.‌

ಕಾರ್ಯಕ್ರಮದಲ್ಲಿ ಗುತ್ತಿಗಾರು ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪ್ಪಯ್ಯ, ನೆಲ್ಲೂರು ಕೆಮ್ರಾಜೆ ಗ್ರಾಪಂ ಅಧ್ಯಕ್ಷೆ  ಶೀಲಾವತಿ, ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅದ್ಯಕ್ಷ ವಿಷ್ಣು ಭಟ್‌ ಮೂಲೆತೋಟ ಶುಭ ಹಾರೈಸಿದರು. ‌ಹೊನ್ನಡಿ ಕಾಂಪ್ಲೆಕ್ಸ್‌ ನ ಕೃಷ್ಣ ಭಟ್ ಹೊನ್ನಡಿ ಉಪಸ್ಥಿತರಿದ್ದರು.

ಸತ್ವಂ ಚಿಕಿತ್ಸಾಲಯದ ವೈದ್ಯ ಡಾ.ಮಹೇಶ್‌ ಕೆ ಎಸ್‌ ಮಾತನಾಡಿ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.  ಡಾ.ಮಹೇಶ್‌ ಕೆ ಎಸ್‌ ಅವರು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ಶಂಕರನಾರಾಯಣ ಶರ್ಮ ಹಾಗೂ ನಿವೃತ್ತ ಶಿಕ್ಷಕಿ ರಾಜೇಶ್ವರಿ ಅವರ ಪುತ್ರ. ವ್ಯಾಸಂಗದ ಬಳಿಕ ಹಲವು ಸಮಯಗಳಿಂದ ಮಣಿಪಾಲ, ಉಡುಪಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror