ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ. ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಮುಂದಾಗಿದೆ.
ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ ಒಪೆಕ್ ವಿಯೆನ್ನಾದಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ 7 ಗಂಟೆಗಳ ಕಾಲ ಸಭೆ ನಡೆಸಿ ತೈಲ ಬೆಲೆ ಹೆಚ್ಚಿಸುವ ಸಲುವಾಗಿ ಉತ್ಪಾದನೆಯನ್ನು ಕಡಿತಗೊಳಿಸಲು ನಿರ್ಧರಿಸಿದೆ. ಇದರ ಪ್ರಕಾರ ದಿನಕ್ಕೆ 14 ಲಕ್ಷ ಬ್ಯಾರೆಲ್‌ಗಳಷ್ಟು ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಯೋಜಿಸಿದೆ.
ತೈಲ ಉತ್ಪಾದನೆ ಕಡಿತವನ್ನು ಜುಲೈ ನಂತರ ಪ್ರಾರಂಭಿಸಬಹುದು ಎಂದು ಸೌದಿ ತಿಳಿಸಿದೆ. ಆದರೆ ಇದು ರಷ್ಯಾ, ನೈಜೀರಿಯಾ ಹಾಗೂ ಅಂಗೋಲಾದ ಪ್ರಸ್ತುತ ಉತ್ಪಾದನಾ ಮಟ್ಟಕ್ಕೆ ಅನುಗುಣವಾಗಿ ತರಲು ಸಾಧ್ಯವಿಲ್ಲ. ಒಪೆಕ್ ಪ್ರಪಂಚದಲ್ಲಿ 40% ರಷ್ಟು ಕಚ್ಚಾತೈಲ ಉತ್ಪಾದನೆಯ ಪಾಲನ್ನು ಹೊಂದಿದೆ. ಆದರೆ ಅದು ತೆಗೆದುಕೊಳ್ಳುವ ನೀತಿ ನಿರ್ಧಾರಗಳು ಜಾಗತಿಕವಾಗಿ ತೈಲ ಬೆಲೆಗಳ ಮೇಲೆ ಪ್ರಮುಖ ಪರಿಣಾಮ ಬೀರುವ ಸಾಧ್ಯತೆಯಿದೆ.ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಂಡಬರುತ್ತಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…