ಸೌಜನ್ಯ ಪ್ರಕರಣ | ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪಾದಯಾತ್ರೆ | ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ನ್ಯಾಯಕ್ಕಾಗಿ ಪ್ರಾರ್ಥನೆ |

August 27, 2023
9:35 PM
ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆ ನಡೆಯಿತು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆಯಾಗಬೇಕು ಎಂದು ಒತ್ತಾಯಿಸಿ  ಭಾನುವಾರ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಸಹಿತ ನೇತ್ರಾವತಿ ಸ್ನಾಘಟ್ಟದಿಂದ ಧರ್ಮಸ್ಥಳದಲ್ಲಿ ಪ್ರವೇಶದ್ವಾರದ ವರೆಗೆ ಶಿವಪಂಚಾಕ್ಷರಿ ಪಠಣದೊಂದಿಗೆ ಪಾದಯಾತ್ರೆಯಲ್ಲಿ ಬಂದು ಬಳಿಕ ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಬಂದು ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಸೌಜನ್ಯ ಕೊಲೆ ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ನೀಡಬೇಕು. ತನ್ಮೂಲಕ ಕೊಲೆಯಾದ ಸೌಜನ್ಯ ಆತ್ಮಕ್ಕೆ ಶಾಂತಿ ದೊರಕುವಂತಾಗಬೇಕು ಎಂದು ಕುಸುಮಾವತಿ ಕಣ್ಣೀರು ಸುರಿಸಿ ಅಣ್ಣಪ್ಪಸ್ವಾಮಿ ಪದತಲದಲ್ಲಿ ಪ್ರಾರ್ಥನೆ ಸಲ್ಲಿಸಿ  ಪ್ರಸಾದ ಸ್ವೀಕರಿಸಿದರು.
ಇದೇ ವೇಳೆ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ ಜೈನ್, ಅಣ್ಣಪ್ಪಸ್ವಾಮಿ ಬೆಟ್ಟದ ತಳದಲ್ಲಿ ಪ್ರಾರ್ಥನೆ ಸಲ್ಲಿಸಿ ಸೌಜನ್ಯ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಆಣೆಪ್ರಮಾಣ ಮಾಡಿದರು. ತಮ್ಮ ಬಗ್ಗೆ ಅಪಪ್ರಚಾರವಾಗುತ್ತಿದೆ ನೈಜ ಆರೋಪಿ ಪತ್ತೆಯಾಗಿ ಉಗ್ರಶಿಕ್ಷೆ ನೀಡಬೇಕು ಎಂದರು.
ಧೀರಜ್ ಕೆಲ್ಲ ಮಾತನಾಡಿ ತಾವು ಕಾನೂನು ಪ್ರಕಾರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ.
ತಾವು ಯಾವುದೇ ರೀತಿಯ ತನಿಖೆಗೆ ಸಿದ್ಧರಿದ್ದೇವೆ. ತಮ್ಮ ಸಂಸಾರದ ಬಗ್ಯೆಯೂ ಮಾಧ್ಯಮದವರು ಕಾಳಜಿ ವಹಿಸಿ ಅಪಪ್ರಚಾರ ಮಾಡಬಾರದು ಎಂದು ಸಲಹೆ ನೀಡಿದರು.

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ
March 31, 2025
3:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |
March 31, 2025
12:05 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group