ಸುದ್ದಿಗಳು

ಸೌಜನ್ಯ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಜನಜಾಗೃತಿ ಜಾಥಾ, ಸಭೆ |

Share

ಪುತ್ತೂರಿನ ಅಭಿನವ ಭಾರತ ಮಿತ್ರ ಮಂಡಳಿ ಮತ್ತು ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆಯ ವತಿಯಿಂದ ಸೋಮವಾರ ಸಂಜೆ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.

Advertisement

ಸಭೆಯಲ್ಲಿ ಮಾತನಾಡಿದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ, ಕಾನೂನು ವ್ಯವಸ್ಥೆಯೊಳಗೆ ಕಳ್ಳರಿದ್ದಾರೆ. ಇದರಿಂದಾಗಿ ನಾವು ಕಾನೂನು ವ್ಯವಸ್ಥೆಯ ಬಗ್ಗೆ ನಂಬಿಕೆ ಕಳಕೊಳ್ಳುವಂತಾಗಿದೆ. ಉಳ್ಳವರಿಗೆ ಮಾತ್ರ ಕಾನೂನು ಎಂಬ ವ್ಯವಸ್ಥೆಯಿಂದಾಗಿ ನಾವಿಂದು ನ್ಯಾಯಕ್ಕಾಗಿ ಹೋರಾಟ ಮಾಡಬೇಕಾಗಿ ಬಂದಿದೆ ಎಂದ ಅವರು ಸೌಜನ್ಯ ಕೊಲೆ ಪ್ರಕರಣದ ತನಿಖಾಧಿಕಾರಿಗಳು ತಮ್ಮ ಮಕ್ಕಳಿಗೆ ಇಂತಹ ಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ನ್ಯಾಯಪೀಠ ಮತ್ತು ಧರ್ಮಪೀಠದಲ್ಲಿ ನ್ಯಾಯ ದೊರಕದಿದ್ದಲ್ಲಿ ನಾವು ಯಾರಲ್ಲಿ ನ್ಯಾಯ ಕೇಳಬೇಕು. ಕೊಲೆಗೀಡಾದ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಹೋರಾಟಕ್ಕೆ ಇಳಿದವರು ನಾವು. ಇದರ ಜೊತೆಗೆ ಧರ್ಮ ಪೀಠದಲ್ಲಿ ಧರ್ಮ ಉಳಿಯಬೇಕು ಎಂಬುದೂ ನಮ್ಮ ಉದ್ದೇಶ ಎಂದರು.

ಸೌಜನ್ಯ ಅವರ ತಾಯಿ ಕುಸುಮಾವತಿ ಮಾತನಾಡಿ ನನ್ನ ಮಗಳಿಗೆ ಆಗಿರುವ ಸ್ಥಿತಿ ಇನ್ನೊಂದು ಹೆಣ್ಣು ಮಗುವಿಗೆ ಆಗಬಾರದು ಎಂಬ ನಿಟ್ಟಿನಲ್ಲಿ ನಾನು ಈ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ಬಿಜೆಪಿಯವರು ಇದೀಗ ನನ್ನ ಮಗಳ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಆದರೆ 11 ವರ್ಷಗಳಿಂದ ಅವರು ನಮಗೆ ನ್ಯಾಯ ಕೊಟ್ಟಿಲ್ಲ. ನಳಿನ್ ಕುಮಾರ್ ಕಟೀಲ್ ಅವರೂ ನಮಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿಲ್ಲ. ಮುಂದಿನ ದಿನಗಳಲ್ಲಿ ನಮಗೆ ಪ್ರಧಾನಿ ಮೋದಿ ಬಳಿ ಹೋಗಿ ನ್ಯಾಯ ಕೇಳಬೇಕು ಅದಕ್ಕಾಗಿ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸೌಜನ್ಯ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಸಂತೋಷ್ ರಾವ್ ಅವರ ಪರವಾಗಿ ವಾದಿಸಿದ್ದ ನ್ಯಾಯವಾದಿಗಳಾದ ಮೋಹಿತ್ ಕುಮಾರ್ ಮತ್ತು ನವೀನ್ ಪದ್ಯಾಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಅಭಿನವ ಭಾರತ ಮಿತ್ರ ಮಂಡಳಿಯ ಪ್ರವರ್ತಕರಾದ ದಿನೇಶ್ ಜೈನ್ , ಅಭಿನವ ಭಾರತ ಮಿತ್ರ ಮಂಡಳಿಯ ಅಧ್ಯಕ್ಷ ಧನ್ಯಕುಮಾರ್ ಬೆಳಂದೂರು, ನವೀನ್ ಕುಲಾಲ್ ಉಪಸ್ಥಿತರಿದ್ದರು.

ಸಭೆಯ ಮೊದಲು ಪ್ರತಿಭಟನೆಯ ಜನಜಾಗೃತಿ ಮೆರವಣಿಗೆ ನಡೆಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…

2 hours ago

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…

3 hours ago

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…

4 hours ago

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…

4 hours ago

ಹೊಸರುಚಿ | ಗುಜ್ಜೆ ಶೇಂಗಾ ಮಸಾಲಾ ಪಲ್ಯ

ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…

8 hours ago

4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ

ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…

8 hours ago